ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ನಿನ್ನೆ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಳವಳ ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ನಿನ್ನೆ ಬ್ರೆಜಿಲ್ ಅಧ್ಯಕ್ಷರಿಂದ ದೂರವಾಣಿ ಕರೆ ಸ್ವೀಕರಿಸಿದ್ದಾರೆ. ಸಂವಾದದ ವೇಳೆ ಉಭಯ ನಾಯಕರು ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕ ಜೀವಹಾನಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇಬ್ಬರೂ ನಾಯಕರು ಪರಿಸ್ಥಿತಿಯನ್ನು ಶೀಘ್ರವಾಗಿ ಪರಿಹರಿಸಲು ಸಂಘಟಿತ ಪ್ರಯತ್ನಗಳಿಗೆ ಕರೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಜಿ 20ರ ಬ್ರೆಜಿಲಿಯನ್ ಪ್ರೆಸಿಡೆನ್ಸಿಯ ಯಶಸ್ಸಿಗೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಿ ಮೋದಿ ಈ ವೇಳೆ ವ್ಯಕ್ತಪಡಿಸಿದರು. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ಹಿನ್ನಲೆಯಲ್ಲಿ ತಮ್ಮ ಸಭೆಯ ನಂತರ ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳ ಕುರಿತು ಅವರು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
Had a good conversation on phone with President @LulaOficial. We are committed to deepen our strategic partnership. Shared our concerns on the situation in West Asia. Will continue to build on the successes of India’s G20 Presidency as Brazil takes over next month.
— Narendra Modi (@narendramodi) November 10, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.