ನವದೆಹಲಿ: ಅಭಿವೃದ್ಧಿ ಹೊಂದಿದ ರಾಜ್ಯ ಮತ್ತು ದೇಶಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಮತದಾರರನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಒತ್ತಾಯಿಸಿದ್ದಾರೆ, ಕಾಂಗ್ರೆಸ್ನ ಕುಟುಂಬ ರಾಜಕಾರಣ ಮತ್ತು ನಕಾರಾತ್ಮಕ ರಾಜಕೀಯದಿಂದ ಜನರು ತುಂಬಾ ಕೋಪಗೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.
X ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ಛತ್ತೀಸ್ಗಢ ಮತದಾರರಿಗೆ ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.
“ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲು ಸಜ್ಜಾಗಿದೆ. ಜನರು ಬಿಜೆಪಿಯ ಉತ್ತಮ ಆಡಳಿತವನ್ನು ನಂಬುತ್ತಿದ್ದಾರೆಯೇ ಹೊರತು ಕಾಂಗ್ರೆಸ್ ನ ಪೊಳ್ಳು ಭರವಸೆಗಳನ್ನಲ್ಲ. ರಾಜ್ಯದಲ್ಲಿ ಮುಂದಿನ ಬಿಜೆಪಿ ಸರ್ಕಾರವು ಅವರ ಆಕಾಂಕ್ಷೆಗಳು ಮತ್ತು ರಾಜ್ಯದ ಸಮೃದ್ಧಿಯ ಸರ್ಕಾರವಾಗಲಿದೆ ಎಂದು ಛತ್ತೀಸ್ಗಢದ ಜನರಿಗೆ ಭರವಸೆ ನೀಡಲು ನಾನು ಬಯಸುತ್ತೇನೆ” ಎಂದು ಅವರು ಛತ್ತೀಸ್ಗಢ ಮತದಾರರಿಗೆ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಮಧ್ಯಪ್ರದೇಶದ ಜನರು ಡಬಲ್ ಇಂಜಿನ್ ಸರ್ಕಾರದ ಪ್ರಯೋಜನಗಳನ್ನು ನೋಡಿದ್ದಾರೆ ಮತ್ತು ಅದರ ಮಹತ್ವವನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ಮೋದಿ ಹೇಳಿದರು, ಸಾರ್ವಜನಿಕ ಸಭೆಗಳಲ್ಲಿ ಭಾಗಿಯಾದ ಸಂದರ್ಭದಲ್ಲಿ ಕಾಂಗ್ರೆಸ್ನ ಋಣಾತ್ಮಕತೆಯ ವಂಶಾಡಳಿತದ ರಾಜಕೀಯದ ಬಗ್ಗೆ ಜನರಲ್ಲಿ ಇರುವ ಕೋಪವನ್ನು ಕಂಡಿದ್ದೇನೆ ಎಂದು ಹೇಳಿದ್ದಾರೆ.
छत्तीसगढ़ में इस बार चुनाव अभियान के दौरान मेरे अनुभव बहुत ही अद्भुत रहे, अभूतपूर्व रहे। कहा जाता है- छत्तीसगढ़िया…सबसे बढ़िया। मैंने इसकी प्रतिध्वनि चारों तरफ महसूस की। छत्तीसगढ़ के परिश्रमी लोग अपने राज्य को और बेहतर बनाने के लिए, सर्वश्रेष्ठ बनाने के लिए नई उम्मीदों और नई…
— Narendra Modi (@narendramodi) November 15, 2023
मध्य प्रदेश विधानसभा चुनाव के लिए इस बार का प्रचार अभियान बल्कि जनता-जनार्दन से आशीर्वाद लेने का अभियान बहुत ही खास रहा। मैं राज्य के कोने-कोने में गया, अनेकों लोगों से मिला, संवाद किया। लोगों में भाजपा के प्रति जो स्नेह है, भाजपा पर जो आस्था है, वो हमारी बहुत बड़ी पूंजी है।…
— Narendra Modi (@narendramodi) November 15, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.