ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಕ್ಕಳೊಂದಿಗೆ ಕಳೆದ ಅಮೂಲ್ಯ ಕ್ಷಣಗಳ ವಿಡಿಯೋವನ್ನು ಇನ್ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಅಲ್ಲದೇ ಮಕ್ಕಳನ್ನು ತಮ್ಮ ಯುವ ಸ್ನೇಹಿತರು ಎಂದು ಬಣ್ಣಿಸಿದ್ದಾರೆ.
ಈ ವಿಡಿಯೋದಲ್ಲಿ ಮಕ್ಕಳು ಅವರವರೇ ಜಗಳವಾಡುವುದನ್ನು ಕಾಣಬಹುದು, ಆಗ ಎರಡು ಮಕ್ಕಳ ತಲೆಯನ್ನು ಹತ್ತಿರ ತೆಗೆದುಕೊಂಡು ಹೋಗಿ ನಿಧಾನವಾಗಿ ಮೋದಿ ಡಿಕ್ಕಿ ಹೊಡೆಸಿದ್ದಾರೆ. ಬಳಿಕ ತಮ್ಮ ಹಣೆಯ ಮೇಲೆ ನಾಣ್ಯವನ್ನು ಅಂಟಿಸಿ ಜಾದೂ ಮಾಡಿದ್ದಾರೆ. ಮಕ್ಕಳೊಂದಿಗೆ ಕಳೆದ ಅವಿಸ್ಮರಣೀಯ ಕ್ಷಣಗಳು ಎಂದು ವಿಡಿಯೋಗೆ ಶೀರ್ಷಿಕೆಯನ್ನು ನೀಡಲಾಗಿದೆ.
ಪ್ರಧಾನಿ ಮೋದಿ ಮಕ್ಕಳೊಂದಿಗೆ ಸಮಯ ಕಳೆಯುತ್ತಿರುವುದು ಇದೇ ಮೊದಲಲ್ಲ, ಈ ಹಿಂದೆಯೂ ಹಲವು ಸಂದರ್ಭಗಳಲ್ಲಿ ಅವರು ಮಕ್ಕಳೊಂದಿಗೆ ನಗುತ್ತಾ, ಕಾಲ ಕಳೆದಿದ್ದಾರೆ. ಈ ವರ್ಷ ರಾಷ್ಟ್ರೀಯ ಶಿಕ್ಷಣ ನೀತಿ ಮೂರು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಅಖಿಲ ಭಾರತ ಶಿಕ್ಷಣ ಸಮಾಗಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಕ್ಕಳನ್ನು ಭೇಟಿ ಮಾಡಿದ್ದರು.
बच्चों के साथ बच्चे बन जाते हैं मोदी जी… pic.twitter.com/UUOXT5oouX
— BJP (@BJP4India) November 16, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.