ಮಾಲ್ಡೀವ್ಸ್: ಇಂದು ಸಂಜೆ ನೂತನ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಮಾಲ್ಡೀವ್ಸ್ ತಲುಪಿದ್ದಾರೆ.
ಈ ವೇಳೆ ರಿಜಿಜು ಅವರು ನಿರ್ಗಮಿತ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ಭೇಟಿ ಮಾಡಿದರು ಮತ್ತು ಕಳೆದ ಕೆಲವು ವರ್ಷಗಳಿಂದ ಬೆಳೆದಿರುವ ಭಾರತ-ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧದ ಆಳ ಮತ್ತು ಪ್ರಗತಿಯನ್ನು ಎತ್ತಿ ತೋರಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ 46 ದೇಶಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಲ್ಡೀವ್ಸ್ನ ಸಂಸತ್ ಕಾರ್ಯದರ್ಶಿ ದೃಢಪಡಿಸಿದ್ದಾರೆ.
ಡಾ. ಮುಯಿಝು ಅವರು ಸೆಪ್ಟೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸೋಲಿಹ್ ಅವರನ್ನು ಸೋಲಿಸಿದರು.
Privileged to call-on President H.E. @IbuSolih
Discussed #India–#Maldives multifaceted partnership which saw tremendous progress in the last few years under the leadership of Hon'ble PM @NarendraModi and HEP @ibusolih. pic.twitter.com/NSmOZiXsnO— Kiren Rijiju (@KirenRijiju) November 16, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.