ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ ನಡೆಯುತ್ತಿರುವ ನಾಗರಿಕರ ಸಾವುಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಸವಾಲುಗಳನ್ನು ಎದುರಿಸುತ್ತಿರುವ ಜಾಗತಿಕ ದಕ್ಷಿಣದ ನಡುವೆ ಏಕತೆ ಮತ್ತು ಸಹಕಾರದ ತುರ್ತು ಅಗತ್ಯವನ್ನು ಪ್ರತಿಪಾದಿಸಿದ್ದಾರೆ.
2ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಇ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿ ಸೇರಿದಂತೆ ಹಿಂಸೆ ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವನ್ನು ಒತ್ತಿ ಹೇಳಿದರು. ಸಂಘರ್ಷ ಪರಿಹಾರದ ಮೂಲಾಧಾರವಾದ ಸಂಯಮ ಮತ್ತು ಸಂವಾದಕ್ಕೆ ಆದ್ಯತೆ ನೀಡುವ ಮಹತ್ವವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.
“ಪಶ್ಚಿಮ ಏಷ್ಯಾ ಪ್ರದೇಶದ ಘಟನೆಗಳಿಂದ ಹೊಸ ಸವಾಲುಗಳು ಹೊರಹೊಮ್ಮುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದರು. “ನಾವು ಸಂಯಮವನ್ನೂ ಅನುಸರಿಸಿದ್ದೇವೆ. ನಾವು ಸಂವಾದ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದ್ದೇವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದಿದ್ದಾರೆ.
“ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ ನಂತರ, ನಾವು ಪ್ಯಾಲೆಸ್ಟೈನ್ ಜನರಿಗೆ ಮಾನವೀಯ ನೆರವನ್ನು ಕಳುಹಿಸಿಕೊಟ್ಟಿದ್ದೇವೆ. ಜಾಗತಿಕ ದಕ್ಷಿಣದ ದೇಶಗಳು ಹೆಚ್ಚಿನ ಜಾಗತಿಕ ಒಳಿತಿಗಾಗಿ ಒಂದಾಗಬೇಕಾದ ಸಮಯ ಇದು” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.