ಬೆಂಗಳೂರು: ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಆಶೀರ್ವಾದ ಪಡೆದರು.
ಇಂದು ಸಂಜೆಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗಾಗಿ ವೀಕ್ಷಕರಾಗಿ ಸಚಿವೆ ನಿರ್ಮಲಾ ಸೀತರಾಮನ್ ರಾಜ್ಯಕ್ಕೆ ಆಗಮಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿ.ವೈ. ವಿಜಯೇಂದ್ರ, ಭಾರತದ ಆರ್ಥಿಕ ಸದೃಢತೆಗೆ ಹೊಸ ಮುನ್ನುಡಿ ಬರೆದು ಪ್ರಧಾನಿ ನರೇಂದ್ರ ಮೋದಿ ಜೀ ಅವರ ಸ್ವಾವಲಂಬಿ ಹಾಗೂ ಸಮೃದ್ಧ ಭಾರತ ನಿರ್ಮಾಣದ ಮಹಾ ಸಂಕಲ್ಪಕ್ಕೆ ಹೆಗಲು ಕೊಟ್ಟಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಕೋರಿ ಅವರ ಆಶೀರ್ವಾದ ಪಡೆಯಲಾಯಿತು ಎಂದಿದ್ದಾರೆ.
ಬುಧವಾರ ಶಾಸಕಾಂಗ ಸಭೆ ಕುರಿತು ಬಿ.ವೈ. ವಿಜಯೇಂದ್ರ ಮಾತನಾಡಿ, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.ಬಿಜೆಪಿ ಶಾಸಕಾಂಗ ಪಕ್ಚದ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ. ವೀಕ್ಷಕರಾಗಿ ಯಾರು ಬರುತ್ತಾರೆ ಎಂಬುದು ನಾಳೆ ಗೊತ್ತಾಗುತ್ತದೆ ಎಂದರು.
ಭಾರತದ ಆರ್ಥಿಕ ಸದೃಢತೆಗೆ ಹೊಸ ಮುನ್ನುಡಿ ಬರೆದು ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಸ್ವಾವಲಂಬಿ ಹಾಗೂ ಸಮೃದ್ಧ ಭಾರತ ನಿರ್ಮಾಣದ ಮಹಾ ಸಂಕಲ್ಪಕ್ಕೆ ಹೆಗಲು ಕೊಟ್ಟಿರುವ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ @nsitharaman ಅವರನ್ನು ಭೇಟಿಯಾಗಿ ಮಾರ್ಗದರ್ಶನ ಕೋರಿ ಅವರ ಆಶೀರ್ವಾದ ಪಡೆಯಲಾಯಿತು. pic.twitter.com/AJPYk9nMJS
— Vijayendra Yediyurappa (@BYVijayendra) November 17, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.