ನವದೆಹಲಿ: ಇಂದು ಮತ್ತು ನಾಳೆ ದೇಶದಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವನ್ನು ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿದೆ.
ರಾಜ್ಯದ ಪ್ರತಿ ಮತಗಟ್ಟೆಗಳಲ್ಲಿ ಇಂದು ಮತ್ತು ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. ಅಧಿಕಾರಿಗಳು ಮತಗಟ್ಟೆಗಳಲ್ಲಿ ಇದ್ದು ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಮತದಾರರು ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ.
ವೋಟರ್ ಹೆಲ್ಪ್ಲೈನ್ ಆಪ್ ಮೂಲಕವೂ ಮತದಾರರು ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಬದಲಾವಣೆಗೆ ಅರ್ಜಿ ಸಲ್ಲಿಸಬಹುದು. ಮತಗಟ್ಟೆ ಅಧಿಕಾರಿ ಮತ್ತು ಮತದಾರರ ನೋಂದಣಿ ಅಧಿಕಾರಿಯ ಮೂಲಕವೂ ಅರ್ಜಿ ಸಲ್ಲಿಸಬಹುದು. ಹೊಸದಾಗಿ ಸೇರ್ಪಡೆಗೊಳ್ಳುವವರು ನಮೂನೆ -6 ರಲ್ಲಿ ಒಂದು ಪೋಟೋ, ಒಂದು ಆಧಾರ್ ಜೆರಾಕ್ಸ್, ಒಂದ ಪಡಿತರ ಚೀಟಿ ಜೆರಾಕ್ಸ್, ಒಂದು ಶಾಲಾ ಟಿ.ಸಿ ಅಥವಾ ಜನನ ಸರ್ಟಿಫಿಕೇಟ್ ಜೆರಾಕ್ಸ್, ಮನೆತೆರಿಗೆ ರಶೀದಿ ಜೆರಾಕ್ಸ್, ಮೊಬೈಲ್ ನಂಬರ್ ಭರ್ತಿ ಮಾಡಿ ಸಲ್ಲಿಕೆ ಮಾಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.