ಜೈಪುರ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದು, ಪಕ್ಷವು ತನ್ನ ತುಷ್ಟೀಕರಣ ನೀತಿಯಿಂದ ಸಮಾಜ ವಿರೋಧಿ ಶಕ್ತಿಗಳನ್ನು ಜೈಲಿನಿಂದ ಬಿಡಿಸುವ ಮೂಲಕ ರಾಜ್ಯವನ್ನು ಅಪರಾಧಗಳು ಮತ್ತು ಗಲಭೆಗಳಲ್ಲಿ ಅಗ್ರಸ್ಥಾನಕ್ಕೆ ಏರಿಸಿದೆ ಎಂದು ಆರೋಪಿಸಿದ್ದಾರೆ.
ಭರತ್ಪುರದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಕಿಡಿಕಾರಿದರು ಮತ್ತು ಜನರು ಜಾದೂಗರ್ ಅವರಿಗೆ ಮತ ಹಾಕದಿರಲು ನಿರ್ಧರಿಸಿದ್ದಾರೆಎಂದರು. ಅಲ್ಲದೇ ಚುನಾವಣೆಯ ನಂತರ ಕಾಂಗ್ರೆಸ್ ರಾಜ್ಯದಿಂದ ಕಣ್ಮರೆಯಾಗುತ್ತದೆ ಎಂದು ಹೇಳಿದರು.
“ಒಂದೆಡೆ ಭಾರತ ವಿಶ್ವದಲ್ಲಿಯೇ ನಾಯಕನಾಗುತ್ತಿದೆ. ಮತ್ತೊಂದೆಡೆ ಕಳೆದ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಕಾಂಗ್ರೆಸ್ ರಾಜಸ್ಥಾನವನ್ನು ಭ್ರಷ್ಟಾಚಾರ, ಗಲಭೆಗಳು ಮತ್ತು ಅಪರಾಧಗಳಲ್ಲಿ ನಾಯಕನನ್ನಾಗಿ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ನವೆಂಬರ್ 25 ರಂದು ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
ಪಕ್ಷವು ತನ್ನ ತುಷ್ಟೀಕರಣ ನೀತಿಯೊಂದಿಗೆ ಅಪರಾಧಿಗಳಿಗೆ ಮುಕ್ತ ಹಸ್ತ ನೀಡುತ್ತಿದೆ ಎಂದು ಆರೋಪಿಸಿದರು.
“ಕಾಂಗ್ರೆಸ್ ಎಲ್ಲಿ ಅಧಿಕಾರಕ್ಕೆ ಬಂದರೂ, ಭಯೋತ್ಪಾದಕರು, ಕ್ರಿಮಿನಲ್ಗಳು ಮತ್ತು ಗಲಭೆಕೋರರನ್ನು ಮುಕ್ತವಾಗಿ ಬಿಡಲಾಗುತ್ತಿದೆ. ಕಾಂಗ್ರೆಸ್ಗೆ ಓಲೈಕೆಯೇ ಸರ್ವಸ್ವ. ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ನಿಮ್ಮ ಪ್ರಾಣವನ್ನು ಪಣಕ್ಕಿಟ್ಟೂ ಸಹ ಯಾವುದೇ ಹಂತಕ್ಕೆ ಹೋಗಬಹುದು” ಎಂದು ಪ್ರಧಾನಿ ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.