ಬೆಳ್ತಂಗಡಿ : ಸರಕಾರದ ಸವಲತ್ತುಗಳನ್ನು ಶೋಷಿತ ವರ್ಗದ ಜನರಿಗೆ ಮುಟ್ಟಿಸುವ ಕೆಲಸ ಆಗಬೇಕು. ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬೆಳ್ತಂಗಡಿ ತಾಪಂ ಅಧ್ಯಕ್ಷೆ ಜಯಂತಿ ಪಾಲೇದು ಹೇಳಿದರು.
ಅವರು ಮುಂಡಾಜೆ ಗ್ರಾಪಂ ಸಭಾಭವನದಲ್ಲಿ ನಡೆದ ಮಹಿಳಾ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರದ ಯಾವುದೇ ಸವಲತ್ತುಗಳು ಮನೆ ಬಾಗಿಲಿಗೆ ಬರುವುದಿಲ್ಲ. ಅದರ ಬಗ್ಗೆ ತಿಳುವಳಿಕೆ ಮುಖ್ಯ. ಇಂದಿನ ಪೈಪೋಟಿಯ ಯುಗದಲ್ಲಿ ಸಿಕ್ಕಿದ ಅವಕಾಶವನ್ನು ಬಳಸಿಕೊಳ್ಳಬೇಕು. ಮಹಿಳೆಯರು ಸಧೃಡವಾಗಿ ಬೆಳೆಯಲು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಅಗತ್ಯ. ಅದರೊಂದಿಗೆ ಮಕ್ಕಳಿಗೆ ಶಿಕ್ಷಣಕ್ಕೂ ಆದ್ಯತೆ ನೀಡಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಭಾರತಿ ಹಾಗೂ ತಾಪಂ ಸಂಯೋಜಕ ಜಯಾನಂದ ಅವರು ಮಹಿಳಾ ಆರ್ಥಿಕ ಸಬಲೀಕರಣದ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಲಾಯಿತು. ನಾಟಿ ವೈದ್ಯರಾದ ಸೇಸಮ್ಮ, ಗುಲಾಬಿ ಅಪ್ಪಯ್ಯ, ಶ್ರಮಜೀವಿ ಮರಿಯಮ್ಮ, ಸಮಾರಂಭಗಳಿಗೆ ಅಡುಗೆ ತಯಾರಿಕೆಯಲ್ಲಿ ಪಳಗಿದ ಮಹಾಲಕ್ಷ್ಮೀ ಇವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ತಾಪಂ ಸದಸ್ಯೆ ಸರೋಜಿನಿ, ಮುಂಡಾಜೆ ಪ್ರ.ಪೂ. ಕಾಲೇಜಿನ ಪ್ರಾಚಾರ್ಯೆ ಜಾಲಿ ಡಿಸೋಜ, ಪಿಡಿಓ ಸಂಜೀವ ನಾಯ್ಕ್ ಹಾಗೂ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.ಗ್ರಾಪಂ ಸದಸ್ಯೆ ಅಶ್ವಿನಿ ಎ. ಹೆಬ್ಬಾರ್ ಸ್ವಾಗತಿಸಿದರು. ಗ್ರಾಪಂ ಸದಸ್ಯೆ ಚಂದ್ರಾವತಿ ಕಾರ್ಯಕ್ರಮ ನಿರ್ವಹಿಸಿ, ಉಪಾಧ್ಯಕ್ಷೆ ವಸಂತಿ ರಾಜಗೋಪಾಲ್ ವಂದಿಸಿದರು. ಗ್ರಾಮ ಸಭೆಗಿಂತ ಮೊದಲು ಪೇಟೆಯಿಂದ ಸಭಾಭವನದ ವರೆಗೆ ಮೆರವಣಿಯನ್ನು ನಡೆಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.