ನವದೆಹಲಿ: ಪ್ರಯಾಣಿಕರಿಗೆ ಅಗತ್ಯವಿರುವ ಸೌಲಭ್ಯಗಳಿಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸದ ಏರ್ ಇಂಡಿಯಾಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) 10 ಲಕ್ಷ ರೂಪಾಯಿ ದಂಡ ವಿಧಿಸಿದೆ. ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಡಿಜಿಸಿಎ ನಡೆಸಿದ ತಪಾಸಣೆಗಳ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿನ ಏರ್ ಇಂಡಿಯಾ ಘಟಕಗಳನ್ನು ಪರಿಶೀಲಿಸಿದ ನಂತರ, ವಿಮಾನಯಾನ ಸಂಸ್ಥೆಯು ನಾಗರಿಕ ವಿಮಾನಯಾನ ನಿಬಂಧನೆಗಳನ್ನು (ಸಿಎಆರ್) ಸರಿಯಾಗಿ ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹೇಳಿಕೆಯಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನವೆಂಬರ್ 3ರಂದು ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.