ಹೈದರಾಬಾದ್: ನವೆಂಬರ್ 21 ರಂದು ಹೈದರಾಬಾದಿನ ಲಲಿತಾಬಾಗ್ನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಕ್ಬರುದ್ದೀನ್ ಓವೈಸಿ, ಚುನಾವಣಾ ಸಮಾವೇಶದ ಸಂದರ್ಭ ಮಾದರಿ ನೀತಿ ಸಂಹಿತೆ ಅನುಸರಿಸುವಂತೆ ತಿಳಿಸಿದ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಾನೆ.
ಪೋಲೀಸ್ ಇನ್ಸ್ಪೆಕ್ಟರ್ ಸ್ಥಳದಿಂದ ಹೊರಡುವುದು ಉತ್ತಮ ಎಂದು ಎಐಎಂಐಎಂ ನಾಯಕ ಎಚ್ಚರಿಕೆ ನೀಡಿದ್ದಾನೆ. ನನ್ನ ಬೆಂಬಲಿಗರಿಗೆ ಒಂದು ಸಿಗ್ನಲ್ ನೀಡಿದರೆ ಸಾಕು ನಿಮ್ಮನ್ನು ಈ ಸ್ಥಳದಿಂದ ಓಡಿಸಲು ಎಂದು ಅನಾಗರಿಕನಂತೆ ಹೇಳಿಕೆ ನೀಡಿದ್ದಾನೆ.
ವಿಧಾನಸಭಾ ಚುನಾವಣೆಯಲ್ಲಿ ಚಂದ್ರಾಯನಗುಟ್ಟ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅಕ್ಬರುದ್ದೀನ್ ಓವೈಸಿ, ಸಂತೋಷನಗರದ ಪೊಲೀಸ್ ಇನ್ಸ್ಪೆಕ್ಟರ್ ಆಗಮಿಸಿ ತಮ್ಮ ಪಕ್ಷದ ಮುಖಂಡರಿಗೆ ಸಭೆಯನ್ನು ನಿಗದಿತ ಸಮಯಕ್ಕೆ ಮುಗಿಸುವಂತೆ ಮನವಿ ಮಾಡಿದ್ದರಿಂದ ಆಕ್ರೋಶಗೊಂಡಿದ್ದಾನೆ.
ಇದೀಗ ಆತನ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಕ್ಬರುದ್ದೀನ್ ಓವೈಸಿ ಈ ಹಿಂದೆಯೂ ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾನೆ. 2012ರಲ್ಲಿ ಅಕ್ಬರುದ್ದೀನ್ ಓವೈಸಿ ಹಿಂದೂಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. 15 ನಿಮಿಷಗಳ ಕಾಲ ಪೊಲೀಸರನ್ನು ತೆಗೆದುಹಾಕಿದರೆ ಹಿಂದೂಗಳು ಉಳಿಯುವುದಿಲ್ಲ ಎಂದು ಬಹಿರಂಗ ಸವಾಲು ಹಾಕಿದ್ದಾನೆ. ಅಲ್ಲದೇ ಹಿಂದೂ ದೇವರು ಮತ್ತು ದೇವತೆಗಳ ಬಗ್ಗೆ ಗೇಲಿ ಮಾಡಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.