
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಶಕುನ ಮತ್ತು ಜೇಬುಗಳ್ಳ ಎಂದೆಲ್ಲಾ ಟೀಕೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ಜಾರಿ ಮಾಡಿದೆ. ನವೆಂಬರ್ 25 ರೊಳಗೆ ಈ ಬಗ್ಗೆ ಪ್ರತಿಕ್ರಿಯೆಯನ್ನು ನೀಡುವಂತೆ ಕೇಳಿದೆ.
“ಪ್ರಧಾನಿಯೊಬ್ಬರನ್ನು ಜೇಬುಗಳ್ಳನಿಗೆ ಹೋಲಿಸುವುದು ಮತ್ತು ಅಪಶಕುನ ಎಂಬ ಪದವನ್ನು ಬಳಸುವುದು ರಾಷ್ಟ್ರೀಯ ರಾಜಕೀಯ ಪಕ್ಷದ ಅತ್ಯಂತ ಹಿರಿಯ ನಾಯಕನಿಗೆ ತಕ್ಕುದಲ್ಲ ಎಂದು ಆರೋಪಿಸಲಾಗಿದೆ. ಇದಲ್ಲದೆ, ಕಳೆದ ಒಂಬತ್ತು ವರ್ಷಗಳಿಂದ ರೂ. 14,00,000 ಕೋಟಿ ರೂಪಾಯಿ ಉದ್ಯಮಿಗಳ ಸಾಲ ಮನ್ನಾ ಮಾಡಿದ ಆರೋಪವನ್ನು ಬಿಜೆಪಿ ಮೇಲೆ ರಾಹುಲ್ ಹಾಕಿದ್ದಾರೆ, ಇದು ಸತ್ಯದ ಮೇಲೆ ಆಧಾರಿತವಾಗಿಲ್ಲ ಎಂದು ಚುನಾವಣಾ ಸಮಿತಿಯು ಹೇಳಿಕೆಯಲ್ಲಿ ತಿಳಿಸಿದೆ.
ರಾಜಸ್ಥಾನದಲ್ಲಿ ಚುನಾವಣೆ ನಡೆಯಲಿರುವ ಸಾರ್ವಜನಿಕ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯವರನ್ನು ಅಪಹಾಸ್ಯ ಮಾಡಿದ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಬಂದಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮತ್ತು ಪಿಕ್ಪಾಕೆಟ್ಗಳ ನಡುವೆ ಹೋಲಿಕೆ ಇದೆ ಎಂದಿದ್ದರು. ಅಲ್ಲದೇ ಭಾರತೀಯ ಪುರುಷರ ಕ್ರಿಕೆಟ್ ತಂಡವು ವಿಶ್ವಕಪ್ 2023 ರ ಫೈನಲ್ ಪಂದ್ಯದಲ್ಲಿ ಸೋತಿದ್ದಕ್ಕೆ ಮೋದಿ ಅಪಶಕುನ ಎಂದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


