ಜೈಪುರ: ರಾಜಸ್ಥಾನದಲ್ಲಿ ನಾಳೆ ವಿಧಾನಸಭಾ ಚುನಾವಣೆ ನಡೆಯಲಿದೆ. ಮತದಾನಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. 199 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 200 ವಿಧಾನಸಭಾ ಸ್ಥಾನಗಳಿದ್ದು, ಅಭ್ಯರ್ಥಿಯೊಬ್ಬರು ನಿಧನರಾದ ಕಾರಣ ಒಂದು ಸ್ಥಾನದ ಚುನಾವಣೆಯನ್ನು ಮುಂದೂಡಲಾಗಿದೆ.
ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 51 ಸಾವಿರದ 507 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸುಮಾರು 5 ಕೋಟಿ 26 ಲಕ್ಷ 90 ಸಾವಿರಕ್ಕೂ ಹೆಚ್ಚು ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.
ಮತಗಟ್ಟೆಯಲ್ಲಿ ಮತದಾರರು ಕಡ್ಡಾಯವಾಗಿ ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು ಎಂದು ಆದೇಶಿಸಲಾಗಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಮತದಾರರು ಆಧಾರ್ ಕಾರ್ಡ್, ಎಂಎನ್ಆರ್ಇಜಿಎ ಜಾಬ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಭಾರತೀಯ ಪಾಸ್ಪೋರ್ಟ್ ಸೇರಿದಂತೆ ಭಾರತದ ಚುನಾವಣಾ ಆಯೋಗದಿಂದ ಅಧಿಕೃತಗೊಂಡ 12 ಪರ್ಯಾಯ ದಾಖಲೆಗಳನ್ನು ತೋರಿಸುವ ಮೂಲಕ ಮತ ಚಲಾಯಿಸಬಹುದು. ಪ್ರತಿ ಮತಗಟ್ಟೆಯಲ್ಲಿ ಮತದಾರರಿಗೆ ಆಸನ, ಕುಡಿಯುವ ನೀರು, ಬೆಳಕು ಮತ್ತು ನೆರಳಿನ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಸೂಚನೆಗಳನ್ನು ನೀಡಿದೆ. ಮತದಾರರಿಗೆ ಸಹಾಯ ಮಾಡಲು ಪ್ರತಿ ಬೂತ್ನಲ್ಲಿ ಮತದಾರರ ಸಹಾಯ ಕೇಂದ್ರಗಳಿದ್ದು, ಮತದಾರರಿಗೆ ಸಹಾಯ ಮಾಡಲು ಬೂತ್ ಮಟ್ಟದ ಅಧಿಕಾರಿಗಳು ತರಬೇತಿ ಪಡೆದ ಸ್ವಯಂಸೇವಕರು ಹಾಜರಿರುತ್ತಾರೆ.
ದೃಷ್ಟಿ ವಿಕಲಚೇತನರು ಅಥವಾ ದಿವ್ಯಾಂಗ ಮತದಾರರಿಗೆ ಸುಲಭವಾಗಿ ಮತ್ತು ಆರಾಮದಾಯಕವಾಗಿ ಮತದಾನ ಮಾಡಲು ಮತದಾನ ಕೇಂದ್ರಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.