
ಬೆಂಗಳೂರು: ಜಮ್ಮು-ಕಾಶ್ಮೀರ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಎನ್ಕೌಂಟರ್ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ನಿನ್ನೆ ಬೆಂಗಳೂರಿಗೆ ಆಗಮಿಸಿದೆ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಸೇರಿದಂತೆ ಗಣ್ಯಾತಿಗಣ್ಯರು ಅಗಲಿದ ಯೋಧನಿಗೆ ಅಂತಿಮ ಗೌರವವನ್ನು ಸಲ್ಲಿಸಿದ್ದಾರೆ.
ಜಿಗಣಿ ನಂದನವನ ಬಡಾವಣೆಯ ಸ್ವಗೃಹದಲ್ಲಿ ಯೋಧನ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆ ಸಾರ್ವಜನಿಕರು ಮತ್ತು ಗಣ್ಯರಿಗೆ ಪ್ರತೇಕ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್ಗಳನ್ನ ಹಾಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದೆ.
ಬೆಳಗ್ಗೆ ಮನೆಯಿಂದ ಅಂತಿಮ ಯಾತ್ರೆ ಹೊರಟು ಜಿಗಣಿ ಓಟಿಸಿ ಸರ್ಕಲ್, ಬನ್ನೇರುಘಟ್ಟ ಮುಖ್ಯ ರಸ್ತೆ, ನೈಸ್ ರೋಡ್, ಕೋನಪ್ಪನ ಅಗ್ರಹಾರ ಸರ್ಕಲ್, ಕೂಡ್ಲುಗೇಟ್ ಮೂಲಕ ಸೋಮಸುಂದರ ಪಾಳ್ಯ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


