
ಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಎಚ್ಎಎಲ್ ಘಟಕಕ್ಕೆ ಭೇಟಿ ನೀಡಿದರು. ಇದೇ ವೇಳೆ ಅವರು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.
ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಬಳಿಕ ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ತೇಜಸ್ನಲ್ಲಿ ಕಿರು ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅನುಭವ ಅವರ್ಣನೀಯವಾದ ಮುದ ನೀಡಿದೆ. ನಮ್ಮ ದೇಶದ ಸ್ಥಳೀಯ ಶಕ್ತಿ ಸಾಮರ್ಥ್ಯಗಳ ಮೇಲೆ ನನ್ನ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದೆ. ನಮ್ಮ ರಾಷ್ಟ್ರೀಯ ಸಾಮರ್ಥ್ಯದ ಬಗ್ಗೆ ನನಗೆ ಹೊಸ ಹೆಮ್ಮೆ ಮತ್ತು ಆಶಾವಾದ ಹುಟ್ಟುವಂತೆ ಮಾಡಿತು” ಎಂದಿದ್ದಾರೆ.
ಎಚ್ಎಎಲ್ನಲ್ಲಿ ಮೋದಿ ತೇಜಸ್ ಜೆಟ್ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯಗಳನ್ನು ಹಾಗೂ ತಾಂತ್ರಿಕ ಸವಲತ್ತುಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ನಂತರ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ತೆಲಂಗಾಣದ ದಿಂಡುಗಲ್ ವಿಮಾನ ನಿಲ್ದಾಣಕ್ಕೆ ಅವರು ಪ್ರಯಾಣ ಬೆಳಸಲಿದ್ದು, ಅಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
मैं आज तेजस में उड़ान भरते हुए अत्यंत गर्व के साथ कह सकता हूं कि हमारी मेहनत और लगन के कारण हम आत्मनिर्भरता के क्षेत्र में विश्व में किसी से कम नहीं हैं। भारतीय वायुसेना, DRDO और HAL के साथ ही समस्त भारतवासियों को हार्दिक शुभकामनाएं। pic.twitter.com/xWJc2QVlWV
— Narendra Modi (@narendramodi) November 25, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


