
ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ದೇಶದಲ್ಲಿ ಮೊಬೈಲ್ ಫೋನ್ ಉತ್ಪಾದನೆ ಬಹುಪಟ್ಟು ಬೆಳೆದಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
9 ವರ್ಷಗಳಲ್ಲಿ ಮೊಬೈಲ್ ಫೋನ್ ಉದ್ಯಮವು 20 ಪಟ್ಟು ಬೆಳೆದಿದೆ ಎಂದು ಅವರು ಹೇಳಿದರು. ಇಂದು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ವೈಷ್ಣವ್ ಅವರು, 2014-15 ರಲ್ಲಿ ಮೊಬೈಲ್ ಫೋನ್ ಉತ್ಪಾದನೆಯು 18,900 ಕೋಟಿ ರೂಪಾಯಿಗಳಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಮೂರು ಲಕ್ಷ 50 ಸಾವಿರ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದರು.
2014-15ರಲ್ಲಿ ದೇಶವು ಶೇಕಡಾ 78 ರಷ್ಟು ಆಮದು ಅವಲಂಬಿತವಾಗಿದ್ದರೆ, ಈಗ ಭಾರತದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್ಗಳಲ್ಲಿ ಶೇಕಡಾ 99 ರಷ್ಟು ಭಾರತದಲ್ಲಿಯೇ ತಯಾರಿಸಲ್ಪಡುತ್ತಿದೆ ಎಂದು ಅವರು ಹೇಳಿದರು.
ಇಂದು ಅವರು ಮೊಬೈಲ್ ವಲಯದ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು.
Met Mobile industry to review progress.
📱Industry has grown 20 times in 9 years.👉2014: 78% import dependent
👉2023: 99.2% of all mobiles sold in India are ‘Made In India’. pic.twitter.com/SxUeDwNjsn— Ashwini Vaishnaw (@AshwiniVaishnaw) November 25, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


