
ತಿರುಪತಿ: ಆಂಧ್ರಪ್ರದೇಶ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿರುಮಲದಲ್ಲಿರುವ ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿ, ಎಲ್ಲಾ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಬೆಳಗ್ಗೆ 8 ಗಂಟೆ ಸುಮಾರಿಗೆ ಪ್ರಧಾನಿ ದೇವಸ್ಥಾನಕ್ಕೆ ಭೇಟಿ ನೀಡಿದರು ಮತ್ತು ಪ್ರಾರ್ಥನೆ ಸಲ್ಲಿಸಿದರು.
“ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ, 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದೆ” ಎಂದು ಮೋದಿ ಅವರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾನುವಾರ ರಾತ್ರಿಯೇ ಪ್ರಧಾನಿ ತಿರುಮಲಕ್ಕೆ ಆಗಮಿಸಿದರು. ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ರೆನಿಗಿಂಟಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡರು.
Om Namo Venkatesaya!
Some more glimpses from Tirumala. pic.twitter.com/WUaJ9cGMlH
— Narendra Modi (@narendramodi) November 27, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


