
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರ ಅಡಿಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಭಾರತವು ಚಲನಚಿತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಹಣವನ್ನು ಹೂಡಿಕೆ ಮಾಡುತ್ತಿದೆ ಎಂದು ಲೆಜೆಂಡರಿ ಹಾಲಿವುಡ್ ನಟ ಮತ್ತು ಚಲನಚಿತ್ರ ನಿರ್ಮಾಪಕ ಮೈಕೆಲ್ ಡೌಗ್ಲಾಸ್ ಹೇಳಿದ್ದಾರೆ.
ಭಾರತೀಯ ಸಿನಿಮಾ ಇಂಡಸ್ಟ್ರಿಗೆ ಇದು ಅತ್ಯುತ್ತಮ ಸಮಯವಾಗಿದ್ದು, ಐಎಫ್ಎಫ್ಐ 54ರಲ್ಲಿ 78ಕ್ಕೂ ಹೆಚ್ಚು ವಿದೇಶಗಳ ಪ್ರಾತಿನಿಧ್ಯವು ಅದರ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಹೇಳಿದರು.
ಅಮೆರಿಕದ ಹಿರಿಯ ನಟ ಗೋವಾದಲ್ಲಿ ನಡೆಯುತ್ತಿರುವ ಇಂಟರ್ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ (ಐಎಫ್ಎಫ್ಐ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.
ಭಾರತೀಯ ಚಲನಚಿತ್ರಗಳು ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ ಮತ್ತು ಪ್ರಪಂಚದ ವಿವಿಧ ಮೂಲೆಗಳಿಗೆ ಹೆಚ್ಚು ಹೆಚ್ಚು ಪ್ರಯಾಣಿಸುತ್ತಿವೆ. ಈ ಬೆಳವಣಿಗೆಯಲ್ಲಿ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಅವರು ಹೇಳಿದರು.
ಇಂದು ನಡೆಯುವ ಐಎಫ್ಎಫ್ಐ ಸಮಾರೋಪ ಸಮಾರಂಭದಲ್ಲಿ ಮೈಕೆಲ್ ಡಗ್ಲಾಸ್ ಅವರಿಗೆ ಪ್ರತಿಷ್ಠಿತ ಸತ್ಯಜಿತ್ ರೇ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


