
ಹೈದರಾಬಾದ್: ವಿಧಾನಸಭಾ ಚುನಾವಣೆ ನಡೆಯಲಿರುವ ತೆಲಂಗಾಣದ ಪತ್ರಿಕೆಗಳಲ್ಲಿ ತನ್ನ ಕಾರ್ಯಗಳ ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸುವಂತೆ ಚುನಾವಣಾ ಆಯೋಗವು ಸೋಮವಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಿದೆ ಮತ್ತು ಜಾಹೀರಾತು ಪ್ರಕಟಿಸುವ ಮೊದಲು ಚುನಾವಣಾ ನೀತಿ ಸಂಹಿತೆಯ ಅಡಿಯಲ್ಲಿ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯದಿದ್ದಕ್ಕಾಗಿ ವಿವರಣೆಯನ್ನು ಕೇಳಿದೆ.
ತೆಲಂಗಾಣ ಚುನಾವಣೆಯ ಮೇಲೆ ಕಣ್ಣಿಟ್ಟು ತೆಲಂಗಾಣ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಆರೋಪಿಸಿ ಬಿಜೆಪಿ ಆಯೋಗಕ್ಕೆ ಮೊನ್ನೆ ದೂರು ಸಲ್ಲಿಸಿತ್ತು.
ತೆಲಂಗಾಣದ ಪ್ರಮುಖ ಪಕ್ಷ ಬಿಆರ್ಎಸ್ ಕೂಡ ಈ ವಿಚಾರವಾಗಿ ಚುನಾವಣಾ ಸಮಿತಿಯನ್ನು ಸಂಪರ್ಕಿಸಿದೆ.
ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಆಯೋಗವು, ಜಾಹೀರಾತುಗಳನ್ನು ಪ್ರಕಟಿಸಲು ರಾಜ್ಯ ಸರ್ಕಾರವು ಪೂರ್ವಾನುಮತಿ ಪಡೆದಿಲ್ಲ, ಇದು ವರ್ಷಗಳ ಹಿಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೀಡಲಾದ ಚುನಾವಣಾ ನೀತಿ ಸಂಹಿತೆ ಸೂಚನೆಗಳ ಉಲ್ಲಂಘನೆಯಾಗಿದೆ ಎಂದಿದೆ.
ಆಯೋಗದಿಂದ ರಾಜ್ಯ ಸರ್ಕಾರವು ಅಗತ್ಯ ಅನುಮೋದನೆಗಳನ್ನು ತೆಗೆದುಕೊಳ್ಳುವವರೆಗೆ ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರವು ಅಂತಹ ಯಾವುದೇ ಜಾಹೀರಾತನ್ನು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಅದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


