ಶ್ರೀನಗರ: ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಭಾರತ ತಂಡದ ಸೋಲನ್ನು ಸಂಭ್ರಮಿಸಿದ ಕಾಶ್ಮೀರದ ಕೃಷಿ ವಿಶ್ವವಿದ್ಯಾನಿಲಯವೊಂದರ ಏಳು ವಿದ್ಯಾರ್ಥಿಗಳನ್ನು ಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ .
ಇತ್ತೀಚಿಗೆ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ನಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ ನಂತರ ತನಗೆ ಬೆದರಿಕೆ ಹಾಕಲಾಗಿದೆ ಮತ್ತು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬ ದೂರ ನೀಡಿದ ಹಿನ್ನೆಲೆಯಲ್ಲಿ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ
ನವೆಂಬರ್ 19 ರ ಮಧ್ಯ ರಾತ್ರಿ ಕಾಶ್ಮೀರದ ಗಂದರ್ಬಾಲ್ನಲ್ಲಿರುವ ಶುಹಾಮಾದಲ್ಲಿರುವ ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (SKUAST) ಪಶುವೈದ್ಯಕೀಯ ವಿಜ್ಞಾನ ವಿಭಾಗದ ಹಾಸ್ಟೆಲ್ನಲ್ಲಿ ಹಲವಾರು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದ ನಂತರ ವಿದ್ಯಾರ್ಥಿಯೊಬ್ಬರು ದೂರು ದಾಖಲಿಸಿದ್ದರು.
SKUAST ನ ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಡಾ ಮೊಹಮ್ಮದ್ ಅಬೂಬಕರ್ ಅಹ್ಮದ್ ಸಿದ್ದಿಕಿ, ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ್ದಾರೆ. “ಮೂಲಭೂತವಾಗಿ, ಏಳು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ, ಆದರೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ವಿದ್ಯಾರ್ಥಿಗಳು ನಮಗೆ ಯಾವುದೇ ದೂರು ಬರೆದಿಲ್ಲ’’ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.