ಲಕ್ನೋ: ಉತ್ತರಪ್ರದೇಶ ಪೊಲೀಸರು ಸೋನ್ಭದ್ರಾ ಜಿಲ್ಲೆಯಲ್ಲಿ ಬಡವರು ಮತ್ತು ಬುಡಕಟ್ಟು ಜನರನ್ನು ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇರೆಗೆ 42 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಅವರಲ್ಲಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಅಪಾರ ಪ್ರಮಾಣದ ಧಾರ್ಮಿಕ ಪುಸ್ತಕಗಳು, ಪ್ರಚಾರ ಸಾಮಗ್ರಿಗಳು ಮತ್ತು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲೆಯ ಚೋಪಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಹಿಯಾ ಟೋಲಾ ನಿವಾಸಿ ನರಸಿಂಗ್ ಎಂಬುವರು ಬುಡಕಟ್ಟು ಜನರು ಮತ್ತು ಬಡವರಿಗೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆಮಿಷ ಒಡ್ಡಲಾಗುತ್ತಿದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಲು ಸಿಂಗ್ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ, ಗುರುವಾರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ 42 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಂತರ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.