ನವದೆಹಲಿ: ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮಿಜೋರಾಂ ಫಲಿತಾಂಶ ನಾಳೆ ಹೊರಬೀಳಲಿದೆ. ಮಿಜೋರಾಂನಲ್ಲಿ ನವೆಂಬರ್ 7 ರಂದು, ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು, ರಾಜಸ್ಥಾನದಲ್ಲಿ ನವೆಂಬರ್ 25 ರಂದು ಮತ್ತು ತೆಲಂಗಾಣದಲ್ಲಿ ನವೆಂಬರ್ 30 ರಂದು ಮತದಾನ ನಡೆದಿತ್ತು. ನವೆಂಬರ್ 7 ಮತ್ತು 17 ರಂದು ಎರಡು ಹಂತದ ಮತದಾನ ಛತ್ತೀಸ್ಗಢದಲ್ಲಿ ನಡೆದಿತ್ತು.
ಮಧ್ಯಪ್ರದೇಶದಲ್ಲಿ ಮತ ಎಣಿಕೆ ಶಾಂತಿಯುತವಾಗಿ ನಡೆಯುತ್ತಿದೆ. 230 ವಿಧಾನಸಭಾ ಸ್ಥಾನಗಳಿಗೆ ರಾಜ್ಯದಲ್ಲಿ ಒಟ್ಟು ಶೇ.77.82 ಮತದಾನವಾಗಿದೆ. 2,533 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ರಾಜಸ್ಥಾನದಲ್ಲೂ ಬಿಜೆಪಿ ಮುನ್ನಡೆಯಲ್ಲಿದೆ.
ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲದ ಹೋರಾಟವನ್ನು ನಡೆಸುತ್ತಿವೆ. ಯಾವ ಪಕ್ಷ ಅಧಿಕಾರಕ್ಕೆ ಏರಲಿದೆ ಎಂಬುದು ಕುತೂಹಲ ಮೂಡಿಸಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆಯುವುದು ಬಹುತೇಕ ಖಚಿತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.