ನವದೆಹಲಿ: ಜನವರಿ 22, 2024 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ‘ರಾಮ ಲಲ್ಲಾ’ ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಜನರಿಗೆ ಆಮಂತ್ರಣ ಪತ್ರಗಳನ್ನು ವಿತರಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಮಂತ್ರಣ ಪತ್ರಿಕೆಯ ಝಲಕ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.
ಅಯೋಧ್ಯೆಯಲ್ಲಿ ನಡೆಯುವ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳಲು ಸುಮಾರು 6,000 ಜನರಿಗೆ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪ್ರಮುಖರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಟ್ರಸ್ಟ್ ಕಳುಹಿಸಿದ ಮೊದಲ ಪತ್ರವನ್ನು ಸ್ವೀಕರಿಸಿದ್ದೇನೆ ಎಂದು ಸಂತರೊಬ್ಬರು ತಿಳಿಸಿದ್ದಾರೆ. ಅಂಚೆ ಮೂಲಕ ಪತ್ರ ಸಿಕ್ಕಿದ್ದು, ಆಮಂತ್ರಣ ಪತ್ರ ಪಡೆದ ಮೊದಲ ವ್ಯಕ್ತಿ ಎಂಬುದಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.
“ಜನವರಿ 2024 ರ ಮೂರನೇ ವಾರದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೂಲಕ ರಾಮ ಲಲ್ಲಾ ವಿಗ್ರಹವನ್ನು ಮೂಲ ಸ್ಥಳದಲ್ಲಿ ಸ್ಥಾಪಿಸಲಾಗುತ್ತದೆ” ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.