ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ. ಮರಾಠಿ ಹೋರಾಟಗಾರರಿಂದ ಸವಾಲು ಎದುರಾಗಬಹುದು ಎಂಬ ಕಾರಣಕ್ಕೆ ಬಿಗಿ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಧಿವೇಶನದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಆಗಮಿಸುತ್ತಿದ್ದಂತೆ ಮೇಯರ್ ಶೋಭಾ ಸೋಮನ್ನಾಚೆ, ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್ ಸೇರಿ ಹಲವರು ಸ್ವಾಗತ ಕೋರಿದ್ದಾರೆ.
ಚಳಿಗಾಲದ ಅಧಿವೇಶನವು ಗ್ಯಾರಂಟಿ ವಿಚಾರ ಸೇರಿ ಹಲವು ವಿಷಯಗಳು ಮತ್ತು ವಿವಾದಗಳ ಬಗ್ಗೆ ಆಸಕ್ತಿದಾಯಕ ಚರ್ಚೆಗಳಿಗೆ ಸಾಕ್ಷಿಯಾಗುವ ಸಾಧ್ಯತೆಗಳಿವೆ. ಈ ನಡುವೆ ಅಧಿವೇಶನವನ್ನು ಸುಸೂತ್ರವಾಗಿ ನಡೆಸಲು ಸರ್ಕಾರ ಸುವರ್ಣ ವಿಧಾನಸೌಧದ ಮುಂದೆ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆಗಳ ಕಡಿಮೆ ಮಾಡಲು ಪ್ರಯತ್ನ ನಡೆಸಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯ ಹೆಚ್ಚಿನ ಹೋಟೆಲ್ಗಳು, ರೆಸಾರ್ಟ್ಗಳು ಮತ್ತು ಲಾಡ್ಜ್ಗಳನ್ನು ಸರ್ಕಾರವು ಸಾವಿರಾರು ಅತಿಥಿಗಳಿಗಾಗಿ ಕಾಯ್ದಿರಿಸಿದೆ, ಇದರಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು, ಮಾಧ್ಯಮದವರು ಮತ್ತು ಇತರರು 10 ದಿನಗಳ ಕಾಲ ತಂಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ನಡುವೆ ಬೆಳಗಾವಿ ನಗರದಿಂದ 18 ಕಿಮೀ ದೂರದಲ್ಲಿರುವ ಮಹಾರಾಷ್ಟ್ರದ ಶಿನ್ನೋಳ್ಳಿ ಗ್ರಾಮದಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ನಿರ್ಧರಿಸಿದೆ. ಮಹಾರಾಷ್ಟ್ರದ ಶಿವಸೇನೆ, ಎನ್ಸಿಪಿ ಮುಖಂಡರು ಮಹಾಮೇಳಾವ್ದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.