ನವದೆಹಲಿ: ದೇಶದಲ್ಲಿ ಪ್ರತಿವರ್ಷ ಡಿಸೆಂಬರ್ 4ರಂದು ರಾಷ್ಟ್ರೀಯ ನೌಕಾ ದಿನವನ್ನು ಆಚರಿಸಲಾಗುತ್ತದೆ. ನೌಕಾಪಡೆಯ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ಈ ದಿನದಂದು ಭಾರತ ಪಾಕಿಸ್ತಾನ ಯುದ್ಧವನ್ನೂ ನೆನಪಿಸಿಕೊಳ್ಳಲಾಗುತ್ತದೆ. ದೇಶಕ್ಕೆ ನೌಕಾಪಡೆಯು ಸಲ್ಲಿಸುತ್ತಿರುವ ಅದ್ಭುತ ಸೇವೆಯನ್ನು ಇಂದು ಇಡೀ ದೇಶವೇ ಸ್ಮರಿಸುತ್ತಿದೆ. 1971 ಡಿಸೆಂಬರ್ 4ರಂದು ಭಾರತವು ಪಾಕಿಸ್ತಾನದ ಮೇಲೆ ನಡೆಸಿದ ಟ್ರೈಡೆಂಟ್ ಕಾರ್ಯಾಚರಣೆ ಮತ್ತು ಅದರಲ್ಲಿ ಹುತಾತ್ಮರಾದ ಭಾರತೀಯ ಯೋಧರ ಗೌರವಾರ್ಥ ಪ್ರತಿವರ್ಷ ಡಿಸೆಂಬರ್ 4ರಂದು ರಾಷ್ಟ್ರೀಯ ನೌಕಾ ದಿನವನ್ನು ಆಚರಿಸಲಾಗುತ್ತದೆ.
ಭಾರತದ ಸಶಸ್ತ್ರ ಪಡೆಯ ಒಂದು ಭಾಗವಾಗಿರುವ ನೌಕಾಪಡೆಗೆ ರಾಷ್ಟ್ರಪತಿಗಳು ದಂಡನಾಯಕರಾಗಿರುತ್ತಾರೆ. ಮರಾಠ ದೊರೆ , 17ನೇ ಶತಮಾನದ ಛತ್ರಪತಿ ಶಿವಾಜಿ ಭೋಂಸ್ಲೆ ಅವರನ್ನು ಭಾರತೀಯ ನೌಕಾಪಡೆಯ ಪಿತಾಮಹ ಕರೆಯಲಾಗಿದೆ. ಇಂದಿನ ನೌಕಾದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದಾರೆ.
ಈ ವರ್ಷ, ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೌಕಾಪಡೆಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಅಲ್ಲಿ ನೌಕಾ ಪಡೆಗಳು ಕಾರ್ಯಾಚರಣೆಯ ಪ್ರದರ್ಶನವನ್ನು ನಡೆಸುತ್ತವೆ. ಈ ಕಾರ್ಯಕ್ರಮದಲ್ಲಿ ಭಾರತೀಯ ನೌಕಾಪಡೆಯ ಅತ್ಯಾಧುನಿಕ ಹಡಗುಗಳು ಮತ್ತು ವಿಮಾನಗಳನ್ನು ಸಾರ್ವಜನಿಕರಿಗೆ ಮತ್ತು ಆನ್ಲೈನ್ ವೀಕ್ಷಕರಿಗೆ ನೇರ ಪ್ರಸಾರದ ಮೂಲಕ ಪ್ರದರ್ಶಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.