ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಸೋಮವಾರ ನಡೆದ ‘ನೌಕಾಪಡೆಯ ದಿನ 2023’ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನೌಕಾಪಡೆಯ ಶ್ರೇಣಿಗಳನ್ನು ಭಾರತೀಯ ಪರಂಪರೆಗೆ ಅನುಗುಣವಾಗಿ ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ.
“ನಮ್ಮ ಪರಂಪರೆಯ ಬಗ್ಗೆ ಹೆಮ್ಮೆಯೊಂದಿಗೆ ಭಾರತೀಯ ನೌಕಾಪಡೆಯ ಶ್ರೇಣಿಯನ್ನು ಭಾರತೀಯರ ಪರಂಪರೆಯಂತೆ, ಸಂಸ್ಕೃತಿಯಂತೆ ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ” ಎಂದು .
“ನಮ್ಮ ರಕ್ಷಣಾ ಪಡೆಗಳಲ್ಲಿ ಮಹಿಳಾ ಶಕ್ತಿಯನ್ನು ಹೆಚ್ಚಿಸುವಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ನೌಕಾಪಡೆಯ ಹಡಗಿನಲ್ಲಿ ದೇಶದ ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು ನೇಮಿಸಿದ್ದಕ್ಕಾಗಿ ನಾನು ನೌಕಾಪಡೆಯನ್ನು ಅಭಿನಂದಿಸಲು ಬಯಸುತ್ತೇನೆ” ಎಂದರು.
ಪ್ರಧಾನಿ ಮೋದಿ ಅವರು ರಾಜ್ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿದರು ಮತ್ತು ಸಿಂಧುದುರ್ಗ ಕೋಟೆ ಸೇರಿದಂತೆ ಹಲವಾರು ಕರಾವಳಿ ಮತ್ತು ಸಮುದ್ರ ಕೋಟೆಗಳನ್ನು ನಿರ್ಮಿಸಿದ ಛತ್ರಪತಿ ಶಿವಾಜಿ ಮಹಾರಾಜರ ಶ್ರೀಮಂತ ಕಡಲ ಪರಂಪರೆಗೆ ನಮನ ಸಲ್ಲಿಸಿದರು.
#WATCH | Sindhudurg, Maharashtra: At the ‘Navy Day 2023’ celebrations, PM Modi says, “With pride in our heritage, I am proud to announce that the ranks in the Indian Navy would be renamed according to the Indian culture. We are also working on increasing women power in our… pic.twitter.com/pIr3hWlut4
— ANI (@ANI) December 4, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.