ಜೈಪುರ: ರಜಪೂತ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಜೈಪುರದ ಮನೆಯಲ್ಲಿ ನಿನ್ನೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಘಟನೆಯ ನಂತರ ರಾಜಸ್ಥಾನದಲ್ಲಿ ಅಶಾಂತಿ ತಲೆದೋರಿದ್ದು, ಅವರ ಬೆಂಬಲಿಗರು ಇಂದು ರಾಜಸ್ಥಾನ ಬಂದ್ಗೆ ಕರೆ ನೀಡಿದ್ದಾರೆ.
ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ನಾಯಕತ್ವ ವಹಿಸಿದ್ದ ಗೊಗಮೇಡಿ ಅವರನ್ನು ಅವರ ಲಿವಿಂಗ್ ರೂಮಿನಲ್ಲಿ ಅವರೊಂದಿಗೆ ಚಹಾ ಸೇವಿಸಿದ ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ.
ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ಗಳೊಂದಿಗೆ ನಿಕಟ ಸಂಬಂಧ ಹೊಂದಿರುವ ಗ್ಯಾಂಗ್ಸ್ಟರ್ಗಳು ಫೇಸ್ಬುಕ್ ಪೋಸ್ಟ್ನಲ್ಲಿ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ದಾಳಿಯಲ್ಲಿ ಗೊಗಮೆಡಿ ಮತ್ತು ಅವರ ಇಬ್ಬರು ಸಹಚರರಿಗೆ ಗುಂಡಿನ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಗೊಗಮೆಡಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಗೊಗಮೆಡಿ ಅವರ ಸಹಾಯಕರು ಒಬ್ಬ ಕೊಲೆಗಾರನನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ ಅನ್ನು ಸೋಲಿಸಿದ ನಂತರ ಆಡಳಿತ ಬದಲಾವಣೆಯ ಪ್ರಕ್ರಿಯೆಯಲ್ಲಿರುವ ರಾಜಸ್ಥಾನದಲ್ಲಿ ರಜಪೂತ ನಾಯಕನ ಹತ್ಯೆಯು ಭಾರೀ ಪ್ರತಿಭಟನೆಯನ್ನು ಹುಟ್ಟುಹಾಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.