ನವದೆಹಲಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನವಾದ ಇಂದು ರಾಷ್ಟ್ರವು ಅವರಿಗೆ ಗೌರವ ಸಲ್ಲಿಸುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಅಂಬೇಡ್ಕರ್ರವರಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ.
ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನವಾಗಿ ಆಚರಣೆ ಮಾಡಲಾಗುತ್ತದೆ. ಬೌದ್ಧ ಸಂಪ್ರದಾಯದಲ್ಲಿ, ‘ಪರಿನಿರ್ವಾಣ’ ಎಂದರೆ ಮರಣಾನಂತರ ನಿರ್ವಾಣವನ್ನು ಪಡೆದ ವ್ಯಕ್ತಿಯನ್ನು ಸೂಚಿಸುತ್ತದೆ. ಬಿಆರ್ ಅಂಬೇಡ್ಕರ್ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿವಸ್ ಎಂದು ಕರೆಯಲಾಗುತ್ತದೆ, ಏಕೆಂದರೆ ಅವರು ಹಿಂದೂ ಧರ್ಮವನ್ನು ತ್ಯಜಿಸಿ, ದೇಶದಲ್ಲಿ ದಲಿತ ಬೌದ್ಧ ಚಳವಳಿಗೆ ಸ್ಫೂರ್ತಿ ನೀಡಿದರು. ಮಹಾಪರಿನಿರ್ವಾಣ ದಿವಸ್ ಬಿ ಆರ್ ಅಂಬೇಡ್ಕರ್ ಅವರು ಭಾರತಕ್ಕೆ ಕಲ್ಪಿಸಿದ ಸಮಾಜದ ಸಮಾನತೆಯನ್ನು ಸೂಚಿಸುತ್ತದೆ.
ಪೂಜ್ಯ ಬಾಬಾ ಸಾಹೇಬರು, ಭಾರತೀಯ ಸಂವಿಧಾನದ ಶಿಲ್ಪಿ ಜೊತೆಗೆ, ಶೋಷಿತರು ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಾಮಾಜಿಕ ಸಾಮರಸ್ಯದ ಅಮರ ಹೋರಾಟಗಾರರಾಗಿದ್ದರು. ಇಂದು ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ಮೋದಿ ಟ್ವಿಟ್ ಮಾಡಿದ್ದಾರೆ,
पूज्य बाबासाहेब भारतीय संविधान के शिल्पकार होने के साथ-साथ सामाजिक समरसता के अमर पुरोधा थे, जिन्होंने शोषितों और वंचितों के कल्याण के लिए अपना जीवन समर्पित कर दिया। आज उनके महापरिनिर्वाण दिवस पर उन्हें मेरा सादर नमन।
— Narendra Modi (@narendramodi) December 6, 2023
#WATCH | Delhi | Prime Minister Narendra Modi pays tribute to Dr BR Ambedkar on his death anniversary, at the Parliament premises. pic.twitter.com/cqFIiHTUeK
— ANI (@ANI) December 6, 2023
#WATCH | Delhi | President Droupadi Murmu pays tribute to Dr BR Ambedkar on his death anniversary, at the Parliament premises. pic.twitter.com/L2Vo90Kvr4
— ANI (@ANI) December 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.