ನವದೆಹಲಿ: ಅಕ್ರಮ ಹೂಡಿಕೆ ಮತ್ತು ಅರೆಕಾಲಿಕ ಉದ್ಯೋಗ ವಂಚನೆಗಳಲ್ಲಿ ತೊಡಗಿರುವ 100 ಕ್ಕೂ ಹೆಚ್ಚು ವೆಬ್ಸೈಟ್ಗಳ ವಿರುದ್ಧ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಂಡಿದೆ. ಅಧಿಕೃತ ಹೇಳಿಕೆಯ ಪ್ರಕಾರ ಈ ವೆಬ್ಸೈಟ್ಗಳನ್ನು ಸಾಗರೋತ್ತರ ವ್ಯಕ್ತಿಗಳು ನಿರ್ವಹಿಸುತ್ತಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ವರ್ಟಿಕಲ್ ನ್ಯಾಷನಲ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ (NCTAU) ಯ ಘಟಕವಾದ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಶನ್ ಸೆಂಟರ್ (I4C) ಕಳೆದ ವಾರ ಈ ವೆಬ್ಸೈಟ್ಗಳನ್ನು ನಿರ್ಬಂಧಿಸುವಂತೆ ಗುರುತಿಸಿ ಶಿಫಾರಸು ಮಾಡಿದೆ. ಈ ವೆಬ್ಸೈಟ್ ಮೋಸದ ಹೂಡಿಕೆ ಯೋಜನೆಗಳು ಮತ್ತು ಅರೆಕಾಲಿಕ ಉದ್ಯೋಗ ಹಗರಣಗಳಲ್ಲಿ ತೊಡಗಿಸಿಕೊಂಡಿದೆ ಎಂಬುದು ಕಂಡುಬಂದ ಬಳಿಕ ಈ ಶಿಫಾರಸು ಮಾಡಲಾಗಿತ್ತು.
2000 ರ ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿಯಲ್ಲಿ, I4C ಮಾಡಿದ ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ವೆಬ್ಸೈಟ್ಗಳನ್ನು ನಿರ್ಬಂಧಿಸಿದೆ. ಈ ವೆಬ್ಸೈಟ್ಗಳು ಸಂಘಟಿತ ಅಕ್ರಮ ಹೂಡಿಕೆಗಳು ಮತ್ತು ಮೋಸದ ಅರೆಕಾಲಿಕ ಉದ್ಯೋಗ ಆಫರ್ಗಳನ್ನು ನೀಡುತ್ತಿತ್ತು ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.