ನವದೆಹಲಿ: ಜಾತಿ ಕಾರಣಕ್ಕೆ ನಾಗಪುರದ ಡಾ.ಹೆಡೆಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಹೇಳಿಕೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ತಳ್ಳಿ ಹಾಕಿದೆ.
ಈ ಬಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆರ್ ಎಸ್ ಎಸ್, ನಾಗಪುರದಲ್ಲಿ ಸಂಘ ಕಾರ್ಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರ ಹಾಗೂ ಹುರುಳಿಲ್ಲದ ಆರೋಪ ಎಂದಿದೆ.
ಆರ್ ಎಸ್ ಎಸ್ ಯಾವುದೇ ಕಚೇರಿಯಲ್ಲಾಗಲಿ ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲಾ ಜಾತಿ ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ. ಆದರೂ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು ಅನಂತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಈ ಅವಮಾನದ ಬಗ್ಗೆ ಹೇಳಿರಲಿಲ್ಲ. ಈಗ 10 ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ- ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.