ನವದೆಹಲಿ: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯನ್ನು ಗೆದ್ದಿರುವ ಕಾಂಗ್ರೆಸ್ ಇದೀಗ ಅಲ್ಲಿ ಅಧಿಕಾರದ ಗದ್ದುಗೆಯನ್ನು ಏರಿದೆ. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.
ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸೋಲಿನಿಂದ ಮುಖಭಂಗ ಅನುಭವಿಸಿದ್ದ ಕಾಂಗ್ರೆಸ್ಗೆ ತೆಲಂಗಾಣದ ಫಲಿತಾಂಶ ತುಸು ನಿರಾಳತೆಯನ್ನು ಒದಗಿಸಿತ್ತು.
ರೇವಂತ್ ರೆಡ್ಡಿ ಅವರು ತೆಲಂಗಾಣದ ಮೊದಲ ಕಾಂಗ್ರೆಸ್ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಅಲ್ಲದೇ ತೆಲಂಗಾಣದ ಎರಡನೇ ಸಿಎಂ ಎನಿಸಿಕೊಂಡಿದ್ದಾರೆ. ತೆಲಂಗಾಣದಲ್ಲಿ 119 ವಿಧಾನಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಿದೆ.
2014 ರಲ್ಲಿ ಆಂಧ್ರಪ್ರದೇಶದಿಂದ ತೆಲಂಗಾಣವನ್ನು ಪ್ರತ್ಯೇಕಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.