ನವದೆಹಲಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ್ದು, ರಾಷ್ಟ್ರವು ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಪ್ರತಿಪಾದಿಸಿದರು.
ದೆಹಲಿಯಲ್ಲಿ ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ತಯಾರಕರ ಸಂಘದ (CEAMA) 44 ನೇ ವಾರ್ಷಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಗೋಯಲ್ ಅವರು, “ನಾವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದ್ದೇವೆ, ಖಂಡಿತವಾಗಿಯೂ ನಾವು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆ. ನಮ್ಮ ವಿದೇಶಿ ವಿನಿಮಯ ಮೀಸಲುಗಳು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿವೆ. ನಮ್ಮ ಹಣದುಬ್ಬರವು ನಮ್ಮ 76 ವರ್ಷಗಳ ಸ್ವಾತಂತ್ರ್ಯದಲ್ಲಿ ನಾವು ಕಂಡ ಅತ್ಯಂತ ಕಡಿಮೆ ಮಟ್ಟದಲ್ಲಿದೆ. ನಾವು ಎಂದಿಗೂ 10 ವರ್ಷಗಳಲ್ಲಿ ಈ ಕೆಳಮಟ್ಟದ ಹಣದುಬ್ಬರವನ್ನು ಸ್ಥಿರವಾಗಿ ಕಂಡಿಲ್ಲ” ಎಂದಿದ್ದಾರೆ.
ಈ ನಡುವೆ, ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ರಾಷ್ಟ್ರೀಯ ಆರ್ಥಿಕತೆಯು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದರ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮೇಲ್ಮನೆ ಸದಸ್ಯರಿಗೆ ವಿವರಣೆ ನೀಡಿದ್ದು, ಭಾರತದ ಎರಡನೇ ತ್ರೈಮಾಸಿಕ ಬೆಳವಣಿಗೆಯು ವಿಶ್ವದಲ್ಲೇ ಅತ್ಯಧಿಕವಾಗಿದೆ ಎಂದು ತಿಳಿಸಿದರು.
“ನಮ್ಮ ಎರಡನೇ ತ್ರೈಮಾಸಿಕ ಬೆಳವಣಿಗೆಯು ತುಂಬಾ ಹೆಚ್ಚಾಗಿದೆ ಮತ್ತು ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ. ನಾವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಆವೇಗವನ್ನು ನಿರಂತರವಾಗಿ ಉಳಿಸಿಕೊಂಡಿದ್ದೇವೆ” ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.