ನವದೆಹಲಿ: ನೈಸರ್ಗಿಕ ಕಾರಣಗಳು ಮತ್ತು ಅಪಘಾತಗಳು ಸೇರಿದಂತೆ ವಿವಿಧ ಕಾರಣಗಳಿಂದಾಗಿ 2018 ರಿಂದ ಕನಿಷ್ಠ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಸಂಸತ್ತಿನಲ್ಲಿ ತಿಳಿಸಿದೆ. 34 ರಾಷ್ಟ್ರಗಳ ಪೈಕಿ ಕೆನಡಾದಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ ಎಂದಿವೆ.
2018 ರಿಂದ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಅವರು ರಾಜ್ಯಸಭೆಯಲ್ಲಿ ಡೇಟಾವನ್ನು ಮಂಡಿಸಿದರು.
ಸಚಿವಾಲಯವು ಸಲ್ಲಿಸಿದ ಮಾಹಿತಿಯ ಪ್ರಕಾರ, ಕೆನಡಾವು 2018 ರಿಂದ 91 ಭಾರತೀಯ ವಿದ್ಯಾರ್ಥಿಗಳ ಸಾವುಗಳನ್ನು ವರದಿ ಮಾಡಿದೆ. ನಂತರ ಯುಕೆ 48, ರಷ್ಯಾ 40 ಯುನೈಟೆಡ್ ಸ್ಟೇಟ್ಸ್ 36, ಆಸ್ಟ್ರೇಲಿಯಾ 35, ಉಕ್ರೇನ್ 21, ಜರ್ಮನಿ 20, ಸೈಪ್ರಸ್ 14, ಇಟಲಿ ಮತ್ತು ಫಿಲಿಪೈನ್ಸ್ ತಲಾ 10 ಸಾವುಗಳನ್ನು ವರದಿ ಮಾಡಿದೆ.
ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಕೇಂದ್ರದ ಬದ್ಧತೆಯನ್ನು ಪುನರುಚ್ಛರಿಸಿದ ಅವರು, ವೈಯಕ್ತಿಕ ಪ್ರಕರಣಗಳನ್ನು ಪರಿಹರಿಸಲು ಮತ್ತು ಭವಿಷ್ಯದಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಕೆಲಸ ಮಾಡುವ ಪ್ರತಿಜ್ಞೆ ಮಾಡಿದರು. ಮಿಷನ್ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ನಿಯಮಿತವಾಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಿ ಅಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ ಎಂದು ಅವರು ಹೇಳಿದರು.
ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯು ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು.
“ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ, ಘಟನೆಯ ಸರಿಯಾದ ತನಿಖೆ ಮತ್ತು ಅಪರಾಧಿಗಳಿಗೆ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಆತಿಥೇಯ ದೇಶದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣವೇ ತೊಡಗಿಸಿಕೊಳ್ಳಲಾಗುತ್ತದೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.