ನವದೆಹಲಿ: ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೇಣುಕಾ ಸಿಂಗ್ ಸಾರುತಾ ಅವರು ಕೇಂದ್ರ ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ನೀಡಿದ ರಾಜೀನಾಮೆಯನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ಇತ್ತೀಚೆಗೆ ನಡೆದ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ನಂತರ ಸಚಿವರುಗಳು ಸಚಿವ ಸ್ಥಾನ ಮತ್ತು ಲೋಕಸಭೆಗೆ ರಾಜೀನಾಮೆ ನೀಡಿದರು
.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರಿಗೆ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಜಲ ಶಕ್ತಿ ಸಚಿವಾಲಯ, ಡಾ ಭಾರತಿ ಪ್ರವೀಣ್ ಪವಾರ್ ಅವರಿಗೆ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ.
ನರೇಂದ್ರ ಸಿಂಗ್ ತೋಮರ್ ಮತ್ತು ಪ್ರಹ್ಲಾದ್ ಸಿಂಗ್ ಪಟೇಲ್ ಇಂದು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದು, ನಿನ್ನೆ ಲೋಕಸಭೆಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿಯಮದ ಪ್ರಕಾರ ರಾಜೀನಾಮೆ ನೀಡಿದ ಬಳಿಕ ಎರಡು ಮನೆಗಳ ಸದಸ್ಯತ್ವವನ್ನು 14 ದಿನಗಳವರೆಗೆ ಮಾತ್ರ ಉಳಿಸಿಕೊಳ್ಳಬಹುದು. ಮೋದಿ ಸರ್ಕಾರದಲ್ಲಿ ತೋಮರ್ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿದ್ದರೆ, ಪಟೇಲ್ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವರಾಗಿದ್ದರು. ರೇಣುಕಾ ಸಿಂಗ್ ಅವರು ಬುಡಕಟ್ಟು ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸುತ್ತಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.