ನವದೆಹಲಿ: ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಕಾಸಿಗಾಗಿ ಪ್ರಶ್ನೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಇಂದು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ.
ಕಾಸಿಗಾಗಿ ಪ್ರಶ್ನೆ ಪ್ರಕರಣವನ್ನು ತನಿಖೆ ಮಾಡಿದ ನೈತಿಕ ಸಮಿತಿಯ ಶಿಫಾರಸುಗಳ ಮೇರೆಗೆ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆದೆ. ಚರ್ಚೆಯ ನಂತರ ಕೆಳಮನೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ವಿರೋಧ ಪಕ್ಷದ ಸದಸ್ಯರು ಮೊಯಿತ್ರಾಗೆ ಬೆಂಬಲ ವ್ಯಕ್ತಪಡಿಸಿದರೆ, ಎನ್ಡಿಎ ಮಿತ್ರಪಕ್ಷಗಳು ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ಮೊಯಿತ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎನ್ಡಿಎ ಮಿತ್ರಪಕ್ಷಗಳು ಅವರ ಉಚ್ಚಾಟನೆಯ ಪರವಾಗಿ ಮತ ಚಲಾಯಿಸಿದರೆ, ಮೊಯಿತ್ರಾ ಅವರಿಗೆ ಬೆಂಬಲ ನೀಡಲು ಅವಕಾಶ ನೀಡದ ಕಾರಣ ವಿರೋಧ ಪಕ್ಷದ ಸದಸ್ಯರು ಕೆಳಮನೆಯಿಂದ ಹೊರನಡೆದರು.
ಸಂಸದ ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದೆಯಾಗಿ ಅನೈತಿಕ ಮತ್ತು ಅಸಭ್ಯವಾಗಿದೆ ಎಂಬ ಸಮಿತಿಯ ಸಂಶೋಧನೆಗಳನ್ನು ಈ ಸದನವು ಒಪ್ಪಿಕೊಳ್ಳುತ್ತದೆ. ಹಾಗಾಗಿ ಅವರು ಸಂಸದರಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ನಿರ್ಧಾರವನ್ನು ಪ್ರಕಟಿಸಿದರು.
ಮೊಯಿತ್ರಾ ಅವರು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ರೂ. 2 ಕೋಟಿ ನಗದು ಮತ್ತು ದುಬಾರಿ ಉಡುಗೊರೆ ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಅಲ್ಲದೇ ಸಂಸತ್ತಿನ ವೆಬ್ಸೈಟ್ನ ಗೌಪ್ಯ ಲಾಗ್-ಇನ್ ಐಡಿಗಳನ್ನು ಉದ್ಯಮಿಗೆ ಕೊಟ್ಟಿದ್ದಾರೆ ಎಂಬ ಆರೋಪವೂ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.