ನವದೆಹಲಿ: ಲೇಖಕಿ-ಸಮಾಜಸೇವಕಿ ಸುಧಾ ಮೂರ್ತಿ ಅವರು ಇಂದು ನೂತನ ಸಂಸತ್ ಭವನಕ್ಕೆ ಭೇಟಿ ನೀಡಿ ತಮ್ಮ ಸಂಸತವನ್ನು ವ್ಯಕ್ತಪಡಿಸಿದ್ದಾರೆ. ಸಂಸತ್ ತುಂಬಾ ಸುಂದರವಾಗಿದೆ ಎಂದು ಬಣ್ಣಿಸಿದ್ದಾರೆ. ಹೊಸ ಮತ್ತು ಹಳೆಯ ಕಟ್ಟಡಗಳಿಗೆ ಭೇಟಿ ನೀಡಿರುವ ಅವರು ದೀರ್ಘಕಾಲಗಳಿಂದ ಅವುಗಳನ್ನು ನೋಡಲು ಬಯಸುತ್ತಿರುವುದಾಗಿ ಹೇಳಿದ್ದಾರೆ.
ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂದು ಕನಸು ನನಸಾಗಿದೆ. ಇದು ಸುಂದರವಾಗಿದೆ. ಇಲ್ಲಿನ ಕಲೆ, ಸಂಸ್ಕೃತಿ, ಭಾರತೀಯ ಇತಿಹಾಸ ಎಲ್ಲವೂ ಸುಂದರವಾಗಿದೆ” ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಒಂದು ದಿನದ ನಂತರ ಸುಧಾ ಮೂರ್ತಿಯವರು ಸಂಸತ್ತಿಗೆ ಭೇಟಿ ನೀಡಿದರು. ರಾಷ್ಟ್ರಪತಿ ಭವನದಲ್ಲಿ ಅವರು ಮಹಿಳಾ ಉದ್ಯಮಿಗಳು, ಶಿಕ್ಷಣತಜ್ಞರು ಮತ್ತು ವಿದ್ಯಾರ್ಥಿಗಳೊಂದಿಗೆ ತಮ್ಮ ಸ್ಪೂರ್ತಿದಾಯಕ ಜೀವನ ಪಯಣವನ್ನು ಹಂಚಿಕೊಂಡರು.
ಇನ್ಫೋಸಿಸ್ ಫೌಂಡೇಶನ್ನ ಅಧ್ಯಕ್ಷರೂ ಆಗಿರುವ ಸುಧಾಮೂರ್ತಿ ಅವರು, “ಹರ್ ಸ್ಟೋರಿ” ಎಂಬ ಸಂವಾದಾತ್ಮಕ ಅಧಿವೇಶನ ಸರಣಿಯನ್ನು ಪ್ರಾರಂಭಿಸಿದ್ದಾರೆ. ಇದು ಸಮಾಜ ಮತ್ತು ರಾಷ್ಟ್ರದ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿದ ಪದ್ಮ ಪ್ರಶಸ್ತಿ ಪುರಸ್ಕೃತ ಮಹಿಳೆಯರ ಜೀವನ ಕಥೆಗಳನ್ನು ಹೈಲೈಟ್ ಮಾಡುವ ಗುರಿಯನ್ನು ಹೊಂದಿದೆ.
ಸುಧಾಮೂರ್ತಿ ಅವರು ಸಾಮಾಜಿಕ ಕಾರ್ಯ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಗಳಿಗಾಗಿ 2023 ರಲ್ಲಿ ಪದ್ಮಭೂಷಣ ಮತ್ತು 2006 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಅವರಿಗೆ ಗೌರವಿಸಲಾಯಿತು.
#WATCH | Delhi | As Sudha Murty visits the Parliament, she says, "It is so beautiful…No words to describe. I wanted to see this for a long time. It was a dream come true today. It is beautiful…It's art, culture, Indian history – everything is beautiful…" pic.twitter.com/P2kKp2Wj2o
— ANI (@ANI) December 8, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.