ನವದೆಹಲಿ: ಭಯೋತ್ಪಾದನಾ ಜಾಲಗಳ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದೆ. ಐಸಿಸ್ ಭಯೋತ್ಪಾದನೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಈ ಪ್ರಕರಣವು ಅಲ್-ಖೈದಾ ಮತ್ತು ಐಸಿಸ್ ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಹಿಂಸಾತ್ಮಕ ಉಗ್ರಗಾಮಿ ಸಿದ್ಧಾಂತಕ್ಕೆ ಸೇರಿದ ಆರೋಪಿಗಳು ಮತ್ತು ಅವರ ಸಹಚರರು ರೂಪಿಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದೆ.
ವರದಿಗಳ ಪ್ರಕಾರ, ಇಂದು ಮುಂಜಾನೆ ದಾಳಿಗಳು ಪ್ರಾರಂಭವಾಗಿದ್ದು, ಹೆಚ್ಚಾಗಿ ಮಹಾರಾಷ್ಟ್ರದಲ್ಲಿ ದಾಳಿ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಪುಣೆಯಲ್ಲಿ 13 ಜನರನ್ನು ಬಂಧಿಸಿದೆ.
ಒಟ್ಟು 44 ಸ್ಥಳಗಳ ಪೈಕಿ, ಎನ್ಐಎ ಶೋಧಕರು ಕರ್ನಾಟಕದ ಒಂದು ಸ್ಥಳ, ಪುಣೆಯಲ್ಲಿ ಎರಡು, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ ಒಂಬತ್ತು ಮತ್ತು ಭಾಯಂದರ್ನಲ್ಲಿ ಒಂದು ಸ್ಥಳವನ್ನು ಶೋಧಿಸಿದ್ದಾರೆ.
ಭಯೋತ್ಪಾದನಾ ನಿಗ್ರಹ ದಳವು ಮಹಾರಾಷ್ಟ್ರ ಮತ್ತು ಕರ್ನಾಟಕದ ಪೊಲೀಸ್ ಪಡೆಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಈ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಭಯೋತ್ಪಾದಕ ಸಂಘಟನೆಗಳು ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು, ಹಿಂಸಾತ್ಮಕ ಜಿಹಾದ್ ನಡೆಸಲು ಧಾರ್ಮಿಕ ತರಗತಿಗಳನ್ನು ನಡೆಸುವುದರ ಜೊತೆಗೆ ಸಮಾನ ಮನಸ್ಕ ಯುವಕರನ್ನು ತಮ್ಮ ಮಡಿಲಿಗೆ ಸೇರಿಸಿಕೊಳ್ಳುತ್ತಿವೆ ಎಂಬ ಆರೋಪದ ಮೇರೆಗೆ ಕಾರ್ಯಾಚರಣೆ ಚುರುಕುಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.