ಸುಲ್ತಾನಪುರ: ಉತ್ತರ ಪ್ರದೇಶದ ಗೋಸಾಯಿಗಂಜ್ನ ಪಟಾಕಿ ತಯಾರಿಕಾ ಘಟಕದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕಿ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಪಟಾಕಿಗಳನ್ನು ತಯಾರಿಸುತ್ತಿದ್ದ ಸಂದರ್ಭ ಸಿಲಿಂಡರ್ ಸ್ಫೋಟಗೊಂಡು ಈ ಘಟನೆ ನಡೆದಿದ್ದು, ಪಟಾಕಿ ತಯಾರಿಸುತ್ತಿದ್ದ ಕಾರ್ಖಾನೆ ಧ್ವಂಸಗೊಂಡಿದೆ. ಮದುವೆ, ಹಬ್ಬಗಳ ಕಾರಣದಿಂದ ಪಟಾಕಿಗಳಿಗೆ ಬೇಡಿಕೆ ಹೆಚ್ಚಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.