ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಕೇಂದ್ರದ ನಾಗರಿಕ ವಿಮಾನಯಾನ ಮತ್ತು ಉಕ್ಕು ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭಾಗವಹಿಸಿದ್ದರು. ಈ ವೇಳೆ ಸಚಿವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಂವಾದ ಕಾರ್ಯಕ್ರಮದ ನೇರ ಪ್ರಸಾರವನ್ನುಸಾರ್ವಜನಿಕರೊಂದಿಗೆ ವೀಕ್ಷಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಸಮೃದ್ಧ ಭಾರತದ ಸಂಕಲ್ಪ ಈ ವಿಕಸಿತ ಭಾರತದ ಸಂಕಲ್ಪವಾಗಿದೆ. ಈ ಹೊಸ ಯಾತ್ರೆಯು ವಿಕಾಸಶೀಲ ಭಾರತದ ಪರಿಕಲ್ಪನೆಗೆ ಇಂಬು ನೀಡಲಿದೆ. ಭಾರತ ಬಡತನ ಮುಕ್ತವಾಗಬೇಕು. ಸ್ವಚ್ಛ ಭಾರತವಾಗಬೇಕು, ಆರೋಗ್ಯಯುಕ್ತ ಭಾರತವಾಗಬೇಕು. ಬಡವರ ಸಶಸ್ತೀಕರಣವಾಗಬೇಕು ಎನ್ನುವ ಸಂಕಲ್ಪಗಳನ್ನು ಹೊಂದಿದೆ. ಪ್ರಧಾನಿಯವರ ಕನಸನ್ನು ನನಸು ಮಾಡಬೇಕಾಗಿರುವುದು ನಮ್ಮೆಲ್ಲರ ಹೊಣೆಯಾಗಿದ್ದು, ಕೇಂದ್ರದ ಜನಪರ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಮುನ್ನಡೆಯಾಗಬೇಕಿದೆ ಎಂದರು.
ಜಿ-20 ಶೃಂಗ ಸಭೆಯ ಅಧ್ಯಕ್ಷತೆ ವಹಿಸಿರುವ ಭಾರತ ವಿಶ್ವಗುರುವಾಗುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮುವ ಸಾಮರ್ಥ್ಯವನ್ನು ಭಾರತ ಹೊಂದಿದೆ. ಭಾರತದ ಸಂತುಷ್ಟೀಕರಣ ನೀತಿ, 9 ವರ್ಷಗಳಿಂದ ಪ್ರಧಾನಿ ಮೋದಿಯವರ ನಿರಂತರ ಪರಿಶ್ರಮ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಉಜ್ವಲ ಯೋಜನೆ, ವಸತಿ ಯೋಜನೆಗಳು ಬಡವರಿಗೆ ನೆರವಾಗಿವೆ ಎಂದರು.
ಡಿಜಿಟಲೀಕರಣ, ಯುಪಿಐ ಪಾವತಿ, ನೇರ ನಗದು ವರ್ಗಾವಣೆಯಿಂದ ಭ್ರಷ್ಟಾಚಾರಕ್ಕೆ ಆಸ್ಪದ ಇಲ್ಲದಂತಾಗಿದೆ. ಪಿಎಂ ಆವಾಸ್ ಯೋಜನೆಯಿಂದ ಲಕ್ಷಾಂತರ ಮಂದಿಗೆ ವಸತಿ ಸೌಲಭ್ಯ ನೀಡಲಾಗಿದೆ. ಗ್ರಾಮೀಣರಿಗೆ ಜಲಜೀವನ್ ಮಿಷನ್ ನಿಂದ ಶುದ್ಧ ಕುಡಿಯುವ ನೀರು ನೀಡಲಾಗುತ್ತಿದೆ. ಜನರ ಆರೋಗ್ಯಕ್ಕಾಗಿ ಆಯುಷ್ಮಾನ್ ಯೋಜನೆ ನೆರವಾಗಿದೆ. ಪಿಎಂ ಸ್ವಾಯತ್ತ ಯೋಜನೆಯಲ್ಲಿ ಡ್ರೋನ್ ಮೂಲಕ ನ್ಯಾನೋ ಯೂರಿಯಾ ಸಿಂಪಡನೆ, ಕಿಸಾನ್ ಸಮ್ಮಾನ್ ನಿಂದ ಕೃಷಿಕರಿಗೆ ನೆರವು, ಜನಧನ ಯೋಜನೆ, ವಿಶ್ವ ಕರ್ಮ ಯೋಜನೆಗಳು ದೇಶದ ಜನರ ಸ್ವಾವಲಂಬನೆ ಬದುಕಿಗೆ ಆಸರೆಯಾಗಿದ್ದು, ಈ ಯೋಜನೆಗಳ ಯಶಸ್ವಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರಬೇಕೆಂದು ನಡೆಸುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಕಿಸಾನ್ ಸಮ್ಮಾನ್ 50 ಲಕ್ಷ , ಗರೀಬ್ ಕಲ್ಯಾಣ ಯೋಜನೆಯಲ್ಲಿ 1.5 ಕೋಟಿ ಹಾಗೂ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ 45 ಲಕ್ಷ ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.