ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯ ರದ್ದತಿಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಜಮ್ಮು-ಕಾಶ್ಮೀರವನ್ನು ಭಾರತದೊಂದಿಗೆ ಸೇರಿಸುವ ಕೇಂದ್ರದ ನಿರ್ಧಾರಕ್ಕೆ ಜಯವಾಗಿದೆ.
“ಕಲಂ 370 ತಾತ್ಕಾಲಿಕ ನಿಬಂಧನೆಯಾಗಿದೆ ಎಂದು ನಾವು ತೀರ್ಮಾಣಕ್ಕೆ ಬಂದಿದ್ದೇವೆ. ಮಧ್ಯಂತರ ಪ್ರಕ್ರಿಯೆಯನ್ನು ಪೂರೈಸಲು ಪರಿವರ್ತನಾ ಉದ್ದೇಶವನ್ನು ಪೂರೈಸಲು ಇದನ್ನು ಪರಿಚಯಿಸಲಾಗಿತ್ತು. ಇದು ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಗಳ ಕಾರಣದಿಂದಾಗಿ ತಾತ್ಕಾಲಿಕ ಉದ್ದೇಶಕ್ಕಾಗಿ ಜಾರಿಯಲ್ಲಿತ್ತು. ಹೀಗಾಗಿ ಇದನ್ನು ಸಂವಿಧಾನದ ಭಾಗ 21 ರಲ್ಲಿ ಇರಿಸಲಾಗಿತ್ತು” ಎಂದು ಸುಪ್ರೀಂಕೋರ್ಟ್ ಹೇಳಿದೆ.
ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯತ್ವದ ಮರುಸ್ಥಾಪನೆಯನ್ನು ಆದಷ್ಟು ಬೇಗ ಮಾಡಬೇಕೆಂದು ನಾವು ನಿರ್ದೇಶಿಸುತ್ತೇವೆ ಎಂದು ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದಾರೆ.
ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಚುನಾವಣೆಗಳನ್ನು ನಡೆಸಲು ಚುನಾವಣಾ ಆಯೋಗವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾವು ನಿರ್ದೇಶಿಸುತ್ತೇವೆ ಎಂದಿದ್ದಾರೆ.
ರಾಷ್ಟ್ರಪತಿಗಳ ಅಧಿಕಾರವನ್ನು ಚಲಾಯಿಸಲು ಸಮಾಲೋಚನೆ ಮತ್ತು ಸಹಯೋಗದ ತತ್ವವನ್ನು ಅನುಸರಿಸುವ ಅಗತ್ಯವಿರಲಿಲ್ಲ. 370(1)(ಡಿ) ನೇ ವಿಧಿಯನ್ನು ಬಳಸಿಕೊಂಡು ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಅನ್ವಯಿಸಲು ರಾಜ್ಯ ಸರ್ಕಾರದ ಒಪ್ಪಿಗೆ ಅಗತ್ಯವಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ಒಪ್ಪಿಗೆ ತೆಗೆದುಕೊಂಡ ರಾಷ್ಟ್ರಪತಿಗಳು ದುರುದ್ದೇಶದಿಂದ ವರ್ತಿಸಲಿಲ್ಲ ಎಂದಿದ್ದಾರೆ.
VIDEO | Five-judge Supreme Court bench assembles to pronounce verdict on pleas challenging abrogation of provisions of Article 370 of Constitution. pic.twitter.com/ZYOPWIQznA
— Press Trust of India (@PTI_News) December 11, 2023
VIDEO | Five-judge Supreme Court bench delivers verdict on petitions challenging abrogation of Article 370 from Jammu and Kashmir. pic.twitter.com/sJKIFWvPAF
— Press Trust of India (@PTI_News) December 11, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.