ನವದೆಹಲಿ: ‘ಕಾಸಿಗಾಗಿ ಪ್ರಶ್ನೆ’ ಪ್ರಕರಣದಲ್ಲಿ ಕಳೆದ ವಾರ ಲೋಕಸಭೆಯಿಂದ ಉಚ್ಚಾಟನೆಗೊಂಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರು ತಮ್ಮ ಉಚ್ಛಾಟನೆಯನ್ನು ಪ್ರಶ್ನಿಸಿ ಇಂದು ಸುಪ್ರೀಂಕೋರ್ಟ್ಗೆ ಮೊರೆ ಹೋಗಿದ್ದಾರೆ.
49 ವರ್ಷದ ಮೊಯಿತ್ರಾ ಅವರು ಸಂಸತ್ತಿನಲ್ಲಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ರೂ 2 ಕೋಟಿ ನಗದು ಮತ್ತು ಐಷಾರಾಮಿ ಉಡುಗೊರೆ ವಸ್ತುಗಳು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಪಾರ್ಲಿಮೆಂಟರಿ ವೆಬ್ಸೈಟ್ನ ಗೌಪ್ಯ ಖಾತೆಯ ಲಾಗ್-ಇನ್ ರುಜುವಾತುಗಳನ್ನು ಕೂಡ ಅವರು ಉದ್ಯಮಿಗೆ ನೀಡಿರುವುದನ್ನು ಮೊಹುವಾ ಒಪ್ಪಿಕೊಂಡಿದ್ದಾರೆ.
ಲೋಕಸಭೆಯಲ್ಲಿ ನೈತಿಕ ಸಮಿತಿಯು ಮೊಹುವಾ ವಿರುದ್ಧ 500 ಪುಟಗಳ ವರದಿಯನ್ನು ಸಲ್ಲಿಕೆ ಮಾಡಿದೆ. ವರದಿ ಮಂಡನೆಯು ಪ್ರತಿಪಕ್ಷಗಳು ಮತ್ತು ಆಡಳಿತಾರೂಢ ಬಿಜೆಪಿ ನಡುವೆ ಬಿರುಸಿನ ಗದ್ದಲಕ್ಕೆ ಕಾರಣವಾಗಿತ್ತು.
ಬಿರುಸಿನ ಚರ್ಚೆ ಮತ್ತು ಧ್ವನಿ ಮತದ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು, “ಸಂಸದೆ ಮಹುವಾ ಮೊಯಿತ್ರಾ ಅವರ ನಡವಳಿಕೆಯು ಅನೈತಿಕ ಮತ್ತು ಅಸಭ್ಯವಾಗಿದೆ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನವು ಒಪ್ಪಿಕೊಳ್ಳುತ್ತದೆ. ಹಾಗಾಗಿ ಅವರು ಸಂಸದರಾಗಿ ಮುಂದುವರಿಯುವುದು ಸೂಕ್ತವಲ್ಲ” ಎನ್ನುವ ಮೂಲಕ ಮೊಹುವಾ ಉಚ್ಛಾಟನೆಗೊಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.