ನವದೆಹಲಿ: ಒಡಿಶಾದಲ್ಲಿ ಕಾಂಗ್ರೆಸ್ ಸಂಸದರೊಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯ ವೇಳೆ ದಾಖಲೆ ಪ್ರಮಾಣದ ನಗದು ಪತ್ತೆಯಾಗಿದ್ದು, ಏಕ ಕಾರ್ಯಾಚರಣೆಯಲ್ಲಿ ಭಾರತದ ಯಾವುದೇ ತನಿಖಾ ಸಂಸ್ಥೆ ವಶಪಡಿಸಿಕೊಂಡ ಅತಿ ದೊಡ್ಡ ಮೊತ್ತ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂಸದ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ವಿವಿಧ ಆಸ್ತಿಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು 353.5 ಕೋಟಿ ರೂಪಾಯಿ ನಗದು ಪತ್ತೆ ಮಾಡಿದ್ದಾರೆ. ಹಲವಾರು ಯಂತ್ರಗಳನ್ನು ಬಳಸಿ ನಗದನ್ನು ಎಣಿಕೆ ಮಾಡಲಾಗಿದ್ದು, ಹಣದ ರಾಶಿಯ ವಿಡಿಯೋ ಮತ್ತು ಫೋಟೋ ಎಲ್ಲೆಡೆ ಸದ್ದು ಮಾಡುತ್ತಿದೆ.
ಎಕ್ಸ್ನಲ್ಲಿ ಬಿಜೆಪಿ ಪೋಸ್ಟ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿರುವ ಪ್ರಧಾನಿ, “ಭಾರತದಲ್ಲಿ ಕಾಲ್ಪನಿಕ ‘ಮನಿ ಹೀಸ್ಟ್’ ಯಾರಿಗೆ ತಾನೆ ಬೇಕು , ನಾವು ಕಾಂಗ್ರೆಸ್ ಪಕ್ಷವನ್ನು ಹೊಂದಿದ್ದೇವೆ ಅದರ ಹೀಸ್ಟ್ 70 ವರ್ಷಗಳಿಂದ ಲೆಜೆಂಡರಿಯಾಗಿದೆ ಮತ್ತು ಈಗಲೂ ಮುಂದುವರೆದಿದೆ!” ಎಂದಿದ್ದಾರೆ.
ಈ ವಿಚಾರದಲ್ಲಿ ಕಾಂಗ್ರೆಸ್ ಮೌನ ವಹಿಸಿರುವ ಬಗ್ಗೆ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ ಮತ್ತು ಭ್ರಷ್ಟಾಚಾರದ ವಿಷಯದಲ್ಲಿ ಇದು ಅವರ ಸ್ವಭಾವ ಎಂದು ಬಣ್ಣಿಸಿದೆ.
In India, who needs 'Money Heist' fiction, when you have the Congress Party, whose heists are legendary for 70 years and counting! https://t.co/J70MCA5lcG
— Narendra Modi (@narendramodi) December 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.