ಭೋಪಾಲ್: ಇಂದು ಮೋಹನ್ ಯಾದವ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಮೋಹನ್ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಅಲ್ಲದೇ ಉಪ ಮುಖ್ಯಮಂತ್ರಿಗಳಾದ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ ಅವರೂ ರಾಜ್ಯಪಾಲರಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕಳೆದ ತಿಂಗಳ ಚುನಾವಣೆಯಲ್ಲಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಯಾದವ್ ಅವರು ಮಧ್ಯಪ್ರದೇಶದ ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿದ್ದರು. ರಾಜ್ಯದ ಜನಸಂಖ್ಯೆಯ 48% ಕ್ಕಿಂತ ಹೆಚ್ಚು ಇರುವ ಇತರೆ ಹಿಂದುಳಿದ ವರ್ಗಗಳಿಗೆ (OBCs) ಸೇರಿದ ಸಮುದಾಯದಿಂದ ಅವರು ಬಂದಿದ್ದಾರೆ.
58 ವರ್ಷದ ಯಾದವ್ 2013 ರಲ್ಲಿ ಉಜ್ಜಯಿನಿ ದಕ್ಷಿಣದಿಂದ ತಮ್ಮ ಮೊದಲ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದರು ಮತ್ತು 2018 ರಲ್ಲಿ ಮರು ಆಯ್ಕೆಯಾದರು. ಅವರು ಚೌಹಾಣ್ ಸರ್ಕಾರದ ಅಡಿಯಲ್ಲಿ ಶಿಕ್ಷಣ ಸಚಿವರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.