ಇಡುಕ್ಕಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ಕೇರಳ ಸರ್ಕಾರ ವಿಫಲವಾಗಿರುವ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ನಿತ್ಯ ಲಕ್ಷಾಂತರ ಭಕ್ತರು ಅಯ್ಯಪ್ಪನ ದರ್ಶನ ಪಡೆಯಲು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಆದರೆ ಸುಲಭವಾಗಿ ದೇವರ ದರ್ಶನ ಮಾಡಲು ಹೆಚ್ಚಿನವರಿಗೆ ಸಾಧ್ಯವಾಗುತ್ತಿಲ್ಲ. ಗಂಟೆಗಟ್ಟಲೆ ಕಾದರೂ ಅಯ್ಯಪ್ಪನ ದರ್ಶವಿಲ್ಲದೆ ಅನೇಕರು ಪರದಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸರಿಯಾದ ವ್ಯವಸ್ಥೆಗಳನ್ನು ಮಾಡದ ಹಿನ್ನೆಲೆಯಲ್ಲಿ ನೂಕುನುಗ್ಗಲುಗಳು ಸಂಭವಿಸಿದೆ. ಇದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ದೇಗುಲದಲ್ಲಿ ಭಾರೀ ನೂಕುನುಗ್ಗಲು ಉಂಟಾಗಿ ಉದ್ಭವಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಉನ್ನತ ಮಟ್ಟದ ಸಚಿವರ ತಂಡವನ್ನು ಪಂಬಾಗೆ ಕಳುಹಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ.
‘ಸಚಿವರು ಪಂಬಾಗೆ ಧಾವಿಸಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಬೇಕು. ದಟ್ಟಣೆ ನಿಯಂತ್ರಿಸಲು ಹಾಗೂ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ನಿರ್ದಿಷ್ಟ ಜವಾಬ್ದಾರಿ ನೀಡಬೇಕು’ ಎಂದು ವಿಪಕ್ಷ ನಾಯಕ ವಿ ಡಿ ಸತೀಶ್ ಆಗ್ರಹಿಸಿದ್ದಾರೆ.
ಇನ್ನೊಂದೆಡೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು, ಅಯ್ಯಪ್ಪನ ದೇಗುಲದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದಿದ್ದಾರೆ. ಅಲ್ಲದೇ ಸಂಘಟಿತ ರೀತಿಯಲ್ಲಿ ವ್ಯವಸ್ಥೆಗಳನ್ನು ಖಾತ್ರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
19 ದಿನಗಳ ಮಂಡಲ ಪೂಜೆಯ ಸಂದರ್ಭದಲ್ಲಿ ದಿನಕ್ಕೆ 62,000 ಭಕ್ತರು ಆಗಮಿಸುತ್ತಾರೆ ಎಂದು ಕೇರಳ ಸಿಎಂ ಕಛೇರಿ ಹೇಳಿತ್ತು. ಆದರೆ ಈ ಸಂಖ್ಯೆ 88,000ಕ್ಕೆ ಏರಿಕೆಯಾದ ಹಿನ್ನೆಲೆಯಲ್ಲಿ ಅಲ್ಲಿವ ವ್ಯವಸ್ಥೆ ಅಸ್ತವ್ಯಸ್ಥವಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.