ನವದೆಹಲಿ: ಲೋಕಸಭೆಯ ಸೆಕ್ರೆಟರಿಯೇಟ್ನ ಮನವಿಯ ಮೇರೆಗೆ ಕೇಂದ್ರ ಗೃಹ ಸಚಿವಾಲಯವು ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.
ಸಚಿವಾಲಯದ ವಕ್ತಾರರು ಈ ಬಗ್ಗೆ ಮಾಹಿತಿ ನೀಡಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮಹಾನಿರ್ದೇಶಕ ದಯಾಳ್ ಸಿಂಗ್ ಅವರ ನೇತೃತ್ವದಲ್ಲಿ ಇತರ ಭದ್ರತಾ ಏಜೆನ್ಸಿಗಳ ಸದಸ್ಯರು ಮತ್ತು ತಜ್ಞರನ್ನು ಒಳಗೊಂಡ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದಿದ್ದಾರೆ.
ವಿಚಾರಣಾ ಸಮಿತಿಯು ಸಂಸತ್ತಿನ ಭದ್ರತೆಯು ಉಲ್ಲಂಘನೆಯಾಗಲು ಕಾರಣವಾದ ಅಂಶಗಳ ಬಗ್ಗೆ ತನಿಖೆ ಮಾಡುತ್ತದೆ, ಲೋಪಗಳನ್ನು ಗುರುತಿಸುತ್ತದೆ ಮತ್ತು ಮುಂದಿನ ಕ್ರಮವನ್ನು ಶಿಫಾರಸು ಮಾಡುತ್ತದೆ. ಸಮಿತಿಯು ಸಂಸತ್ತಿನಲ್ಲಿ ಭದ್ರತೆಯನ್ನು ಸುಧಾರಿಸುವ ಸಲಹೆಗಳನ್ನು ಒಳಗೊಂಡಂತೆ ಶಿಫಾರಸುಗಳೊಂದಿಗೆ ತನ್ನ ವರದಿಯನ್ನು ಶೀಘ್ರದಲ್ಲಿ ಸಲ್ಲಿಸುತ್ತದೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ಲೋಕಸಭೆಗೆ ನುಗ್ಗಿದ್ದ ಇಬ್ಬರು ಹಳದಿ ಬಣ್ಣದ ಹೊಗೆಯನ್ನು ಸಿಂಪಡಿಸಿ ದಾಂಧಲೆಯನ್ನು ನಡೆಸಿದ್ದರು. ಅಲ್ಲದೇ ಹಲವು ಘೋಷಣೆಗಳನ್ನು ಕೂಗಿದ್ದಾರೆ. ಈ ದುಷ್ಕರ್ಮಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತೀವ್ರ ವಿಚಾರಣೆಯನ್ನು ನಡೆಸಲಾಗುತ್ತಿದೆ. ಇಷ್ಟೊಂದು ದೊಡ್ಡ ಭದ್ರತಾ ಲೋಪ ನಡೆಯಲು ಕಾರಣವೇನು ಎಂಬ ಬಗ್ಗೆ ತನಿಖೆ ಕ್ಷಿಪ್ರಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.