ನವದೆಹಲಿ: 2001ರ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿಯ 22ನೇ ವರ್ಷಾಚರಣೆಯ ಸಂದರ್ಭದಲ್ಲೇ ಭಾರೀ ಭಯ ಹುಟ್ಟಿಸಿದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಲೋಕಸಭೆ ಸೆಕ್ರೆಟರಿಯೇಟ್ ಎಂಟು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.
ಮೂಲಗಳ ಪ್ರಕಾರ, ಅಮಾನತುಗೊಂಡ ಸಿಬ್ಬಂದಿಯನ್ನು ರಾಂಪಾಲ್, ಅರವಿಂದ್, ವೀರ್ ದಾಸ್, ಗಣೇಶ್, ಅನಿಲ್, ಪರ್ದೀಪ್, ವಿಮಿತ್ ಅಡ್ ನರೇಂಡೆ ಎಂದು ಗುರುತಿಸಲಾಗಿದೆ.
ದೆಹಲಿ ಪೊಲೀಸರು ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.
2001 ರ ಸಂಸತ್ತಿನ ಭಯೋತ್ಪಾದಕ ದಾಳಿಯ 22 ನೇ ವಾರ್ಷಿಕೋತ್ಸವದಂದು, ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್ಗೆ ಹಾರಿ ಹೊಗೆ ಸಿಂಪಡಿಸಿ ಭಾರೀ ದಾಂಧಲೆ ನಡೆಸಿದ್ದಾರೆ. ಬೆಂಚುಗಳ ಮೇಲೆ ಹಾರಿ ಕ್ಯಾನಿಸ್ಟರ್ಗಳಿಂದ ಅನಿಲವನ್ನು ಸಿಂಪಡಿಸಿದರು, ಇದು ಭಾರಿ ಭಯವನ್ನು ಉಂಟುಮಾಡಿತು ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.