ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಧಾರ್ಮಿಕ ಸ್ಥಳಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ “ಅನಿಯಂತ್ರಿತ ಧ್ವನಿವರ್ಧಕಗಳ ಬಳಕೆಯನ್ನು” ನಿಷೇಧಿಸಲು ಆದೇಶ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೇ ತೆರೆದ ಮಾರುಕಟ್ಟೆಯಲ್ಲಿ ಮಾಂಸ ಮಾರಾಟವನ್ನೂ ನಿಷೇಧಿಸಲು ಆದೇಶಿಸಿದ್ದಾರೆ.
ಬುಧವಾರ ನಡೆದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ನಾವು ಹಲವು ಚರ್ಚೆಗಳನ್ನು ನಡೆಸಿದ್ದೇವೆ, ನಾವು ಬಹಿರಂಗವಾಗಿ ಮಾಂಸ ಮಾರಾಟದ ವಿಷಯವನ್ನು ಪ್ರಸ್ತಾಪಿಸಿದ್ದೇವೆ ಮತ್ತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇದಕ್ಕಾಗಿ ನಿಯಮಗಳನ್ನು ತರಲು ಪ್ರಸ್ತಾಪಿಸಿದ್ದೇವೆ ಎಂದು ಮುಖ್ಯಮಂತ್ರಿ ಯಾದವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶಗಳ ಆಧಾರದ ಮೇಲೆ ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿಗಳನ್ನು ತಕ್ಷಣದ ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ಹೇಳಿದರು.
ಧಾರ್ಮಿಕ ಸ್ಥಳಗಳಲ್ಲಿ ಸಂಗೀತ ನುಡಿಸುವ ಧ್ವನಿವರ್ಧಕಗಳು ಮತ್ತು ಡಿಜೆ ಸಿಸ್ಟಮ್ಗಳ ಧ್ವನಿ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಪ್ರತಿ ಜಿಲ್ಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅನ್ನು ರಚಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.