ನವದೆಹಲಿ: ಇಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ. ಇಂಧನ ಸಂರಕ್ಷಣೆಯ ಮಹತ್ವದ ಕುರಿತು ಸಂದೇಶವನ್ನು ಹರಡಲು ಮತ್ತು ಇಂಧನ ದಕ್ಷತೆ ಮತ್ತು ಸಂರಕ್ಷಣೆಯಲ್ಲಿ ರಾಷ್ಟ್ರದ ಸಾಧನೆಗಳನ್ನು ಪ್ರದರ್ಶಿಸಲು ಪ್ರತಿ ವರ್ಷ ಡಿಸೆಂಬರ್ 14 ರಂದು ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.
ಈ ದಿನದ ಸಂದರ್ಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಉಜ್ವಲ ಭವಿಷ್ಯಕ್ಕಾಗಿ ಜನರು ತಮ್ಮ ಆಯ್ಕೆಗಳ ಬಗ್ಗೆ ಜಾಗೃತರಾಗಿರಲು ಕರೆ ನೀಡಿದ್ದಾರೆ. ಪ್ರತಿಯೊಂದು ಇಂಧನ ಉಳಿತಾಯ ಪ್ರಯತ್ನವು ಸುಸ್ಥಿರ ಭವಿಷ್ಯವನ್ನು ರೂಪಿಸುತ್ತದೆ. ಝೇಂಕರಿಸುವ ನಗರಗಳಿಂದ ಶಾಂತಿಯುತ ಹಳ್ಳಿಗಳವರೆಗೆ, ಸಂರಕ್ಷಣೆಯ ತತ್ವವು ಭಾರತದ ಪ್ರತಿಯೊಂದು ಮೂಲೆಯನ್ನು ಬೆಳಗಲಿ, ಪೀಳಿಗೆಗೆ ಹಸಿರು ಪರಂಪರೆಯನ್ನು ಪೋಷಿಸಲಿ ಎಂದು ಅವರು ಆಶಿಸಿದ್ದಾರೆ.
ಸುಸ್ಥಿರ ಭವಿಷ್ಯಕ್ಕಾಗಿ ಪರಿಸರ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದು ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕೆ, ಕೃಷಿ, ಮನೆ, ಸಾರಿಗೆ ಸೇರಿದಂತೆ ಎಲ್ಲಾ ಕೇತ್ರದಲ್ಲೂ ಶಕ್ತಿಯನ್ನು ಮಿತವಾಗಿ ಬಳಸಲು ಜಾಗೃತಿಯನ್ನು ಮೂಡಿಸುವುದು ಇಂದಿನ ದಿನದ ಉದ್ದೇಶವಾಗಿದೆ.
ಶಕ್ತಿಯ ಮಿತ ಬಳಕೆಗೆ ಸಂಬಂಧಿಸಿದಂತೆ ಸೆಮಿನಾರ್, ಕಾರ್ಯಾಗಾರಗಳು ಮತ್ತು ಇಂಧನ ಉಳಿತಾಯ ಅಭಿಯಾನಗಳು ಸೇರಿದಂತೆ ಈ ದಿನ ಹಲವಾರು ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಅಲ್ಲದೆ ಈ ದಿನ ಶಕ್ತಿ ಸಂರಕ್ಷಣಾ ಪ್ರಯತ್ನದಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಗಳು, ಕೈಗಾರಿಕೆ ಮತ್ತು ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿಯನ್ನು ಸಹ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.