ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಶರ್ಮಾ ಅವರೊಂದಿಗೆ ಇತ್ತೀಚೆಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾಗಿ ಆಯ್ಕೆಯಾದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರು ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಲವಾರು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ನವೆಂಬರ್ 25 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 69 ಸ್ಥಾನಗಳನ್ನು ಪಡೆದಿತ್ತು. ರಾಜ್ಯದ 200 ವಿಧಾನಸಭಾ ಸ್ಥಾನಗಳ ಪೈಕಿ 199 ಸ್ಥಾನಗಳಿಗೆ ಮತದಾನ ನಡೆದಿದೆ.
ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ಸರೋಜ್ ಪಾಂಡೆ ಮತ್ತು ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿರುವ ಶರ್ಮಾ ಅವರನ್ನು ನಿಯೋಜಿತ ಮುಖ್ಯಮಂತ್ರಿ ಎಂದು ಘೋಷಿಸಲಾಯಿತು.
ವಿಧ್ಯಾಧರ್ ನಗರ ಶಾಸಕಿ ಕುಮಾರಿ ಮತ್ತು ದುಡು ಶಾಸಕ ಬೈರ್ವಾ ಅವರನ್ನು ಉಪಮುಖ್ಯಮಂತ್ರಿಗಳಾಗಿ ಮತ್ತು ಅಜ್ಮೀರ್ ಉತ್ತರ ಶಾಸಕ ವಾಸುದೇವ್ ದೇವ್ನಾನಿ ಅವರನ್ನು ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.