ನವದೆಹಲಿ: ಬೆಳಗಾವಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಬೆತ್ತಲೆ ಮಾಡಿ ಥಳಿಸಿರುವ ಘಟನೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತೀವ್ರವಾಗಿ ಖಂಡಿಸಿದ್ದಾರೆ, ಇದು ನಾಚಿಕೆಗೇಡಿನ ಸಂಗತಿ ಎಂದು ಬಣ್ಣಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ವಿರುದ್ಧ ಇಂತಹ ಘೋರ ಅಪರಾಧಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.
ಘಟನೆ ನಡೆದ ಗ್ರಾಮಕ್ಕೆ ಭೇಟಿ ನೀಡಿ ವರದಿ ಸಲ್ಲಿಸಲು ಪಕ್ಷದ ಮಹಿಳಾ ಸಂಸದರನ್ನು ಒಳಗೊಂಡ ಐವರು ಸದಸ್ಯರ ಸತ್ಯಶೋಧನಾ ಸಮಿತಿಯನ್ನು ನಡ್ಡಾ ರಚಿಸಿರುವುದಾಗಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ.
ಡಿಸೆಂಬರ್ 11 ರಂದು ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಹಿಳೆಯ ಮಗ ತಾನು ಪ್ರೇಮಿಸಿದ್ದ ಯುವತಿಯ ಜೊತೆ ಪರಾರಿಯಾಗಿದ್ದ ಕಾರಣಕ್ಕೆ ಯುವತಿಯ ಕುಟುಂಬಿಕರು ಮಹಿಳೆಯನ್ನು ಲೈಟ್ ಕಂಬಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.
ಈ ಪ್ರಕರಣದಡಿ ಎಂಟು ಮಂದಿಯನ್ನು ಬಂಧಿಸಲಾಗಿದೆ, ಇನ್ನೂ ಎಂಟು ಮಂದಿಗಾಗಿ ಶೋಧ ನಡೆಯುತ್ತಿದೆ.
ಇನ್ನೊಂದೆಡೆ ಪ್ರಕರಣವನ್ನು ಖಂಡಿಸಿ ಬಿಜೆಪಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.